BREAKING: ಬಸ್ –ಟ್ರಕ್ ಡಿಕ್ಕಿಯಾಗಿ ಘೋರ ದುರಂತ: ಭೀಕರ ಅಪಘಾತದಲ್ಲಿ 7 ಮಂದಿ ದುರ್ಮರಣ

ಅಂಬಾಲಾ(ಹರಿಯಾಣ): ಅಂಬಾಲಾ-ದೆಹಲಿ-ಜಮ್ಮು ರಾಷ್ಟ್ರೀಯ ಹೆದ್ದಾರಿಯಲ್ಲಿ ಬಸ್ ಮತ್ತು ಟ್ರಕ್ ನಡುವೆ ಡಿಕ್ಕಿಯಾಗಿ ಒಂದೇ ಕುಟುಂಬದ 7 ಮಂದಿ ಸಾವುಕಂಡಿದ್ದಾರೆ. ಅಪಘಾತದಲ್ಲಿ 20ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ.

ಮಾಹಿತಿ ಪ್ರಕಾರ, ಬಸ್‌ ಗೆ ಟ್ರಕ್ ಡಿಕ್ಕಿ ಹೊಡೆದು ಈ ಅಪಘಾತ ಸಂಭವಿಸಿದೆ. ಅಂಬಾಲಾ-ದೆಹಲಿ-ಜಮ್ಮು ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಭವಿಸಿದ ಭೀಕರ ಅಪಘಾತದಲ್ಲಿ ಒಂದು ಕುಟುಂಬದ ಕನಿಷ್ಠ ಏಳು ಸದಸ್ಯರು ಪ್ರಾಣ ಕಳೆದುಕೊಂಡಿದ್ದಾರೆ. 20 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ.

ಅಂಬಾಲಾ ಕ್ಯಾಂಟ್‌ನ ಸಿವಿಲ್ ಆಸ್ಪತ್ರೆಯ ಡಾ.ಕೌಶಲ್ ಕುಮಾರ್ ಘಟನೆಯನ್ನು ದೃಢಪಡಿಸಿದ್ದಾರೆ ಮತ್ತು ಗಾಯಾಳುಗಳಿಗೆ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಹೇಳಿದ್ದಾರೆ. ಬಲಿಯಾದವರು ಮಾತಾ ವೈಷ್ಣೋ ದೇವಿ ದೇಗುಲಕ್ಕೆ ಪ್ರಯಾಣಿಸುತ್ತಿದ್ದ ಯಾತ್ರಾರ್ಥಿಗಳಾಗಿದ್ದಾರೆ. ಅಧಿಕಾರಿಗಳು, ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಅಪಘಾತದ ಕಾರಣ ತಿಳಿಯಲು ತನಿಖೆ ನಡೆಸುತ್ತಿದ್ದಾರೆ. ಹೆಚ್ಚಿನ ವಿವರ ನಿರೀಕ್ಷಿಸಲಾಗಿದೆ.

https://twitter.com/ANI/status/1793838772796485738

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read