HomeKarnatakaಶಿಕ್ಷಕರ ಹಲವಾರು ಬೇಡಿಕೆಗಳನ್ನು ಹಂತ ಹಂತವಾಗಿ ಈಡೇರಿಸಲಾಗುವುದು : ಸಿಎಂ ಸಿದ್ದರಾಮಯ್ಯ

ಶಿಕ್ಷಕರ ಹಲವಾರು ಬೇಡಿಕೆಗಳನ್ನು ಹಂತ ಹಂತವಾಗಿ ಈಡೇರಿಸಲಾಗುವುದು : ಸಿಎಂ ಸಿದ್ದರಾಮಯ್ಯ

ಬೆಂಗಳೂರು :   ಹಣಕಾಸು ಸಚಿವರಾಗಿದ್ದ ಸಂದರ್ಭದಲ್ಲಿ 5 ವರ್ಷಗಳಲ್ಲಿ ಒಂದು ಲಕ್ಷ ಶಿಕ್ಷಕರನ್ನು ನೇಮಕ ಮಾಡಿದ್ದೆ. 6 ಮತ್ತು 7ನೇ ವೇತನ ಆಯೋಗವನ್ನು ಜಾರಿ ಮಾಡಿದ್ದು ನಾನೆ. ಉಳಿದ ಬೇಡಿಕೆಗಳನ್ನು ಈಡೇರಿಸುವ ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು. ಒಪಿಎಸ್ ಬಗ್ಗೆ ಸಚಿವ ಸಂಪುಟ ಸಭೆಯಲ್ಲಿ ಚರ್ಚೆ ಮಾಡಿ ತೀರ್ಮಾನಕ್ಕೆ ಬರುತ್ತೇವೆ. ವೇತನ ಬಡ್ತಿ ನೀಡಲು ಪ್ರಯತ್ನ ಮಾಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘವು ಬೆಂಗಳೂರಿನಲ್ಲಿ ಆಯೋಜಿಸಿದ್ದ ರಾಜ್ಯ ಮಟ್ಟದ ಶೈಕ್ಷಣಿಕ ಮಹಾಸಮ್ಮೇಳನ ಹಾಗೂ ಸುವರ್ಣ ಮಹೋತ್ಸವ  ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು.

ಶಿಕ್ಷಕರು ದೇಶದ ಭವಿಷ್ಯವನ್ನು ರೂಪಿಸುವವರು. ದೇಶಕ್ಕೆ ಸ್ವಾತಂತ್ರ್ಯ ಬಂದಾಗ 12 ರಿಂದ 15% ರಷ್ಟಿದ್ದ ಸಾಕ್ಷರತೆ ಪ್ರಮಾಣ ಪ್ರಸ್ತುತ 74% ತಲುಪಿದೆ. ಶಿಕ್ಷಣ ಕ್ಷೇತ್ರವನ್ನು ಅವಲೋಕಿಸಿದಾಗ ಗುಣಮಟ್ಟದ, ಸಮಾಜದ ಸಮಸ್ಯೆಗಳಿಗೆ ಸ್ಪಂದಿಸುವ ಶಿಕ್ಷಣ ದೊರಕುತ್ತಿದೆಯೇ ಎನ್ನುವ ಪ್ರಶ್ನೆ ಮೂಡುತ್ತದೆ. ಇದು ಶಿಕ್ಷಕರ ತಪ್ಪಲ್ಲ, ಪಟ್ಟಭದ್ರ ವ್ಯವಸ್ಥೆಯ ಪರಿಣಾಮವಾಗಿ ಜಾತಿ ಎನ್ನುವುದು ಸಮಾಜದಲ್ಲಿ ಭದ್ರವಾಗಿ ನೆಲೆಯೂರಿರುವುದರಿಂದ ಶಿಕ್ಷಣದಲ್ಲಿ ನಿರೀಕ್ಷಿಸಿದಷ್ಟು ಬದಲಾವಣೆ ಮಾಡಲು ಸಾಧ್ಯವಾಗಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಸಂವಿಧಾನವು ಒಬ್ಬ ವ್ಯಕ್ತಿ ಜವಾಬ್ದಾರಿಯುತವಾಗಿ ವಿಕಾಸವಾಗಲು ವೈಜ್ಞಾನಿಕ, ವೈಚಾರಿಕ ಶಿಕ್ಷಣ ದೊರೆಯಬೇಕೆಂದು ಸ್ಪಷ್ಟವಾಗಿ ಹೇಳುತ್ತದೆ. ಸಾಮಾಜಿಕ ವ್ಯವಸ್ಥೆಯಲ್ಲಿ ಜಾತಿ, ಮೌಢ್ಯ, ಕಂದಾಚಾರಗಳಿಂದ ಸಮಾಜ ಕೂಡಿದ್ದು, ಇವುಗಳನ್ನು ದೂರ ಮಾಡುವ ಶಿಕ್ಷಣ ಪಡೆಯುವುದು ಅತ್ಯಂತ ಅಗತ್ಯ.ಅಸಮಾನತೆಯಿಂದ ಕೂಡಿರುವ ಸಮಾಜದಲ್ಲಿ ಮುಖ್ಯವಾಹಿನಿಗೆ ಎಲ್ಲರೂ ಬರಬೇಕೆಂದರೆ ಸಮಾಜದಲ್ಲಿ ಬದಲಾವಣೆಯಾಗಬೇಕು ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

ಆರ್ಥಿಕ ಸಾಮಾಜಿಕ ಸ್ವಾತಂತ್ರ್ಯ ಎಲ್ಲರಿಗೂ ದೊರೆಯಬೇಕು. ವೈಚಾರಿಕತೆ ಮತ್ತು ವೈಜ್ಞಾನಿಕ ಶಿಕ್ಷಣ ನೀಡಲು ಶಿಕ್ಷಕರಿಂದ ಮಾತ್ರ ಸಾಧ್ಯ. ಸಾಮಾನ್ಯರನ್ನು  ಅಸಾಮಾನ್ಯರನ್ನಾಗಿ ಮಾಡುವ ಶಕ್ತಿ ಇರುವುದು ಶಿಕ್ಷಕರಿಗೆ ಮಾತ್ರ. ಬುದ್ಧಿ, ಕರುಣೆ ಮತ್ತು ಕೌಶಲ್ಯ ಮಿಳಿತವಾದಾಗ ಮಾತ್ರ ವಿಕಾಸ ಸಾಧ್ಯ ಎಂದು ಮಹಾತ್ಮಾ ಗಾಂಧಿ ಹೇಳಿದ್ದಾರೆ. ಪ್ರಾಥಮಿಕ ಮತ್ತು ಪ್ರೌಢಶಾಲಾ ಶಿಕ್ಷಕರನ್ನು ಅತ್ಯಂತ ಹೆಚ್ಚು ಗೌರವಿಸುತ್ತೇನೆ. ಅವರ ಕಾರಣದಿಂದಲೇ ನಾನಿಂದು ಮುಖ್ಯಮಂತ್ರಿ ಸ್ಥಾನದವರೆಗೆ ಬೆಳೆದಿದ್ದು. 

ಶಿಕ್ಷಕರ ಹಲವಾರು ಬೇಡಿಕೆಗಳನ್ನು ಹಂತ ಹಂತವಾಗಿ ಈಡೇರಿಸಲಾಗುವುದು. ಹಿಂದೆ ಹಣಕಾಸು ಸಚಿವರಾಗಿದ್ದ ಸಂದರ್ಭದಲ್ಲಿ 5 ವರ್ಷಗಳಲ್ಲಿ ಒಂದು ಲಕ್ಷ ಶಿಕ್ಷಕರನ್ನು ನೇಮಕ ಮಾಡಿದ್ದೆ. 6 ಮತ್ತು 7ನೇ ವೇತನ ಆಯೋಗವನ್ನು ಜಾರಿ ಮಾಡಿದ್ದು ನಾನೆ. ಉಳಿದ ಬೇಡಿಕೆಗಳನ್ನು ಈಡೇರಿಸುವ ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು. ಒಪಿಎಸ್ ಬಗ್ಗೆ ಸಚಿವ ಸಂಪುಟ ಸಭೆಯಲ್ಲಿ ಚರ್ಚೆ ಮಾಡಿ ತೀರ್ಮಾನಕ್ಕೆ ಬರುತ್ತೇವೆ. ವೇತನ ಬಡ್ತಿ ನೀಡಲು ಪ್ರಯತ್ನ ಮಾಡಲಾಗುವುದು.

ಶಿಕ್ಷಕರ ನಡವಳಿಕೆ ಉತ್ತಮವಾಗಿರಬೇಕು. ಎಲ್ಲಾ ಮಕ್ಕಳಿಗೂ ವೈಚಾರಿಕತೆ , ವೈಜ್ಞಾನಿಕತೆಯುಳ್ಳ ಶಿಕ್ಷಣ ನೀಡಿದರೆ ಸುಭದ್ರ, ಸುಂದರ  ಸಮಾಜ, ದೇಶವನ್ನು ಕಟ್ಟಬಹುದು. ರಾಷ್ಟ್ರದ ಭವಿಷ್ಯವನ್ನು ರೂಪಿಸುವಂಥ ಮಕ್ಕಳನ್ನು ತಯಾರು ಮಾಡುವುದು ನಿಮ್ಮ ಗುರಿಯಾಗಲಿ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

LEAVE A REPLY

Please enter your comment!
Please enter your name here

Most Popular