ವಿಮಾನದಲ್ಲೇ ಸೆಕ್ಸ್..! ಈಸಿ ಜೆಟ್‍ ಶೌಚಾಲಯದಲ್ಲಿ ಲೈಂಗಿಕ ಕ್ರಿಯೆ ನಡೆಸಿ ಸಿಕ್ಕಿಬಿದ್ದ ಜೋಡಿ

ಈಸಿ ಜೆಟ್ ವಿಮಾನ ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದರೆ, ಇಬ್ಬರು ಪ್ರಯಾಣಿಕರು ವಿಮಾನದ ಟಾಯ್ಲೆಟ್‌ನಲ್ಲಿ ಲೈಂಗಿಕ ಕ್ರಿಯೆ ನಡೆಸಿ ಸಿಕ್ಕಿಬಿದ್ದ ಘಟನೆ ನಡೆದಿದೆ. ಸಹ ಪ್ರಯಾಣಿಕರು ಇದರ ವಿಡಿಯೋ ಮಾಡಿದ್ದು, ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.

ವಿಮಾನದ ಶೌಚಾಲಯದಲ್ಲಿ ಲೈಂಗಿಕ ಕ್ರಿಯೆ ನಡೆಸಿದ್ದ ಪ್ರಯಾಣಿಕರಿಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ಶೌಚಾಲಯದಲ್ಲಿದ್ದ ಇಬ್ಬರನ್ನು ಬಹಿರಂಗಪಡಿಸುವ ಸಲುವಾಗಿ ಕ್ಯಾಬಿನ್ ಸಿಬ್ಬಂದಿ ಬಾಗಿಲು ತೆರೆದಿದ್ದಾರೆ. ಈ ವೇಳೆ ಸ್ವಲ್ಪ ಕೋಲಾಹಲವೇ ನಡೆದಿದೆ. ಸಹ ಪ್ರಯಾಣಿಕರು ಇದರ ವಿಡಿಯೋ ಚಿತ್ರೀಕರಿಸಿದ್ದಾರೆ.

ವಿಮಾನ ಸ್ಪ್ಯಾನಿಷ್ ದ್ವೀಪಕ್ಕೆ ಆಗಮಿಸುತ್ತಿದ್ದಂತೆ ಪೊಲೀಸರು ವಿಮಾನದ ಶೌಚಾಲಯದಲ್ಲಿ ಲೈಂಗಿಕ ಕ್ರಿಯೆ ನಡೆಸಿದ ಜೋಡಿಯನ್ನು ವಶಕ್ಕೆ ಪಡೆದಿದ್ದಾರೆ.

ವಿಡಿಯೋವನ್ನು ಸಾಮಾಜಿಕ ಮಾಧ್ಯಮದಲ್ಲಿ ವ್ಯಾಪಕವಾಗಿ ಹಂಚಿಕೊಳ್ಳಲಾಗಿದೆ. ಹಲವು ಬಳಕೆದಾರರು ಇದಕ್ಕೆ ತಮಾಷೆಯಾಗಿ ಪ್ರತಿಕ್ರಿಯಿಸಿದ್ದರೆ, ಇನ್ನೂ ಕೆಲವರು ಟೀಕಿಸಿದ್ದಾರೆ.

ಸೆಪ್ಟೆಂಬರ್ 8ರಂದು ಲುಟನ್‌ನಿಂದ ಇಬಿಜಾಗೆ ಪ್ರಯಾಣಿಸುತ್ತಿದ್ದ ವೇಳೆ ಜೋಡಿ ಈ ರೀತಿ ವರ್ತಿಸಿದ್ದಾರೆ. ಲೈಂಗಿಕ ಅಪರಾಧಗಳ ಕಾಯಿದೆ 2004ರ ಸೆಕ್ಷನ್ 71ರ ಪ್ರಕಾರ, ಸಾರ್ವಜನಿಕರಿಗೆ ಪ್ರವೇಶವಿರುವ ಶೌಚಾಲಯದಲ್ಲಿ ಲೈಂಗಿಕ ಕ್ರಿಯೆ ನಡೆಸುವುದು ಕಾನೂನುಬಾಹಿರವಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read