HomeLatest Newsಕಾರ್ಯಕ್ರಮಕ್ಕೆ ಕರೆದೊಯ್ದು ಲೈಂಗಿಕ ದೌರ್ಜನ್ಯ: ಉತ್ತರ ಕರ್ನಾಟಕ ಜಾನಪದ ಗಾಯಕ ಮ್ಯೂಸಿಕ್ ಮೈಲಾರಿ ವಿರುದ್ಧ ಪೋಕ್ಸೊ...

ಕಾರ್ಯಕ್ರಮಕ್ಕೆ ಕರೆದೊಯ್ದು ಲೈಂಗಿಕ ದೌರ್ಜನ್ಯ: ಉತ್ತರ ಕರ್ನಾಟಕ ಜಾನಪದ ಗಾಯಕ ಮ್ಯೂಸಿಕ್ ಮೈಲಾರಿ ವಿರುದ್ಧ ಪೋಕ್ಸೊ ಕೇಸ್

ಬೆಳಗಾವಿ: ಕಾರ್ಯಕ್ರಮವೊಂದರಲ್ಲಿ ನೃತ್ಯ ಮಾಡಲು ಕರೆದುಕೊಂಡು ಹೋಗಿ ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಉತ್ತರ ಕರ್ನಾಟಕದ ಜಾನಪದ ಗಾಯಕ ಮ್ಯೂಸಿಕ್ ಮೈಲಾರಿ ವಿರುದ್ಧ ಪೋಕ್ಸೊ ಪ್ರಕರಣ ದಾಖಲಾಗಿದೆ.

ಅ. 24ರಂದು ಬಾಗಲಕೋಟೆ ಜಿಲ್ಲೆ ಮಹಾಲಿಂಗಪುರದಲ್ಲಿ ನಡೆದ ಕಾರ್ಯಕ್ರಮಕ್ಕೆ ಮ್ಯೂಸಿಕ್ ಮೈಲಾರಿ, ಅಥಣಿ ಶಂಕರ, ದಾನವಿ ಸಿಂಗರ್ ಅವರು ನೃತ್ಯ ಮಾಡಲು ಅಪ್ರಾಪ್ತ ಬಾಲಕಿಯನ್ನು ಕರೆದುಕೊಂಡು ಹೋಗಿದ್ದರು. ಕಾರ್ಯಕ್ರಮ ಮುಗಿದ ನಂತರ ಲಾಡ್ಜ್ ನಲ್ಲಿ ಉಳಿದುಕೊಂಡಿದ್ದರು.

ಈ ವೇಳೆ ಮ್ಯೂಸಿಕ್ ಮೈಲಾರಿಯೊಂದಿಗೆ ಸಹಕರಿಸುವಂತೆ ದಾನವಿ ಸಿಂಗರ್ ಬಾಲಕಿಗೆ ಒತ್ತಾಯಿಸಿದ್ದ. ತಿರಸ್ಕರಿಸಿದಾಗ ಬಾಲಕಿಯ ಮೇಲೆ ಅಥಣಿ ಶಂಕರ ಹಲ್ಲೆ ಮಾಡಿದ್ದು, ಮ್ಯೂಸಿಕ್ ಮೈಲಾರಿ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ ಎಂದು ದೂರು ನೀಡಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular