HomeLatest NewsBREAKING : ಬೆಂಗಳೂರಲ್ಲಿ ಗಾಂಜಾ ನಶೆಯಲ್ಲಿ ಯುವತಿ ಮೇಲೆ ಲೈಂಗಿಕ ದೌರ್ಜನ್ಯ ಕೇಸ್ : ಐವರು...

BREAKING : ಬೆಂಗಳೂರಲ್ಲಿ ಗಾಂಜಾ ನಶೆಯಲ್ಲಿ ಯುವತಿ ಮೇಲೆ ಲೈಂಗಿಕ ದೌರ್ಜನ್ಯ ಕೇಸ್ : ಐವರು ಆರೋಪಿಗಳು ಅರೆಸ್ಟ್.!

ಬೆಂಗಳೂರು : ಬೆಂಗಳೂರಲ್ಲಿ ಗಾಂಜಾ ನಶೆಯಲ್ಲಿ ಯುವತಿ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಐವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ಬನ್ನೇರುಘಟ್ಟ ಪೊಲೀಸರು ಕಾರ್ಯಾಚರಣೆ ನಡೆಸಿ ಐವರನ್ನು ಬಂಧಿಸಿದ್ದಾರೆ. ಬಂಧಿತರನ್ನ ಜಾನ್ ರಿಚರ್ಡ್, ಪುನೀತ್ ಅಲಿಯಾಸ್ ಕಾಡೆ, ಅನುಷ್ ಮದನ್, ಅರುಣ್, ಕಾಣಿಕ್ಯಾ ಎಂದು ಗುರುತಿಸಲಾಗಿದೆ.

ಬೆಂಗಳೂರಲ್ಲಿ ಬೆಚ್ಚಿ ಬೀಳಿಸೋ ಘಟನೆ ನಡೆದಿದ್ದು, ಗಾಂಜಾ ನಶೆಯಲ್ಲಿ ನಡು ರಸ್ತೆಯಲ್ಲೇ ಯುವತಿ ಮೇಲೆ ಕಾಮಕರು ಲೈಂಗಿಕ ದೌರ್ಜನ್ಯ ಎಸಗಿದ್ದಾರೆ.ಬೆಂಗಳೂರು ತಾಲೂಕಿನ ಬನ್ನೇರುಘಟ್ಟ ಠಾಣಾ ವ್ಯಾಪ್ತಿಯ ಮೈಲಸಂದ್ರ ಬಳಿ ರೇಣುಕಾ ಯಲ್ಲಮ್ಮ ಬಡಾವಣೆಯಲ್ಲಿ ಘಟನೆ ನಡೆದಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಯುವತಿ ಮನೆಗೆ ದಿನಸಿ ತರಲು ಅಂಗಡಿಗೆ ಹೊರಟಿದ್ದರು. ಈ ವೇಳೆ ಗಾಂಜಾ ಮತ್ತಿನಲ್ಲಿದ್ದ
ಪುಂಡರು ಆಕೆಯನ್ನು ಅಡ್ಡಗಟ್ಟಿ ಮೈ ಕೈ ಮುಟ್ಟಿ ಅಸಭ್ಯವಾಗಿ ವರ್ತಿಸಿದ್ದಾರೆ, ಇದಕ್ಕೆ ಯುವತಿ ಪ್ರತಿರೋಧ ವ್ಯಕ್ತಪಡಿಸಿದಾಗ ಆಕೆಯ ಮೇಲೆ ಹಲ್ಲೆ ಯತ್ನ ನಡೆಸಿದ್ದಾರೆ. ಈ ಸಂಬಂಧ ಯುವತಿ ಪೊಲೀಸರಿಗೆ ದೂರು ನೀಡಿದ್ದಾಳೆ. ಆರೋಪಿಗಳು ಯುವತಿ ನೆರವಿಗೆ ಬಂದ ಸ್ಥಳೀಯರ ಮೇಲೂ ಹಲ್ಲೆ ನಡೆಸಿದ್ದಾರೆ ಎನ್ನಲಾಗಿದೆ.ಹಲ್ಲೆ ಮತ್ತು ದೌರ್ಜನ್ಯದ ದೃಶ್ಯಗಳು ಸಿಸಿಟಿವಿಯಲ್ಲಿ ಸೆರೆಯಾಗಿದೆ.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular