HomeKarnatakaಮೈಸೂರಲ್ಲಿ ಕಾಮುಕರ ಅಟ್ಟಹಾಸ, ಯುವತಿ ಅಪಹರಿಸಿ ಸಾಮೂಹಿಕ ಅತ್ಯಾಚಾರ

ಮೈಸೂರಲ್ಲಿ ಕಾಮುಕರ ಅಟ್ಟಹಾಸ, ಯುವತಿ ಅಪಹರಿಸಿ ಸಾಮೂಹಿಕ ಅತ್ಯಾಚಾರ

ಮೈಸೂರು: ಯುವತಿಯನ್ನು ಅಪಹರಿಸಿ ಸಾಮೂಹಿಕ ಅತ್ಯಾಚಾರ ಎಸಗಿದ್ದ ಆರೋಪದ ಮೇಲೆ ಟಿ. ನರಸೀಪುರ ಪೊಲೀಸರು ಮೂವರನ್ನು ಬಂಧಿಸಿದ್ದಾರೆ.

ಕಿಶೋರ್(24), ಕಿರಣ್(30), ರಿಯಾನ್(39) ಬಂಧಿತ ಆರೋಪಿಗಳು. ಪಶ್ಚಿಮ ಬಂಗಾಳ ಮೂಲದ ಯುವತಿಯನ್ನು ಅಪಹರಿಸಿ ಸಾಮೂಹಿಕ ಅತ್ಯಾಚಾರ ಎಸಗಿದ ಆರೋಪ ಕೇಳಿ ಬಂದಿದೆ. ಫಾಸ್ಟ್ ಫುಡ್ ಅಂಗಡಿಯಲ್ಲಿ ಯುವತಿ ಕೆಲಸ ಮಾಡುತ್ತಿದ್ದು, ವಿಳಾಸ ಕೇಳುವ ನೆಪದಲ್ಲಿ ಆಕೆಯನ್ನು ಅಪಹರಿಸಿ ಅತ್ಯಾಚಾರ ಎಸಗಿದ್ದಾರೆ.

ಕಳೆದ ಮೂರು ತಿಂಗಳಿಂದ ಟಿ. ನರಸೀಪುರದ ವಿವೇಕಾನಂದ ನಗರದಲ್ಲಿ ಬಾಡಿಗೆ ಮನೆಯಲ್ಲಿ ವಾಸವಾಗಿದ್ದ ಪಶ್ಚಿಮ ಬಂಗಾಳ ಮೂಲದ ಯುವತಿ ಸ್ಥಳೀಯ ಫಾಸ್ಟ್ ಫುಡ್ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದರು. ಜುಲೈ 18ರಂದು ಸ್ನೇಹಿತೆಯ ಹುಟ್ಟುಹಬ್ಬದಲ್ಲಿ ಭಾಗವಹಿಸಲು ಮೈಸೂರಿಗೆ ತೆರಳಿದ್ದ ಯುವತಿ ರಾತ್ರಿ 9.45 ರ ಸುಮಾರಿಗೆ ಟಿ. ನರಸೀಪುರದ ಖಾಸಗಿ ಬಸ್ ನಿಲ್ದಾಣಕ್ಕೆ ಬಂದು ಮನೆಗೆ ಹೋಗುವಾಗ ಬಸ್ ನಿಲ್ದಾಣ ಸಮೀಪ ಕಾರ್ ನಲ್ಲಿ ಬಂದ ಮೂವರು ವಿಳಾಸ ಕೇಳುವ ನೆಪದಲ್ಲಿ ಆಕೆಯನ್ನು ಕಾರ್ ನೊಳಗೆ ಎಳೆದೊಯ್ದಿದ್ದಾರೆ. ನಂತರ ಲಾಡ್ಜ್ ಗೆ ಕರೆದೊಯ್ದು ಅತ್ಯಾಚಾರ ಎಸಗಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಚಾಮರಾಜನಗರ ತಾಲೂಕಿನ ಸಂತೆಮರಹಳ್ಳಿ ಸಮೀಪ ಲಾಡ್ಜ್ ವೊಂದರಲ್ಲಿ ಮೂವರು ಅತ್ಯಾಚಾರ ಎಸಗಿದ್ದಾರೆ. ಯುವತಿ ಬಳಿ ಇದ್ದ ಎರಡು ಮೊಬೈಲ್, 5000 ರೂ. ಕಸಿದು ಆಕೆಯನ್ನು ಮನೆಯ ಸಮೀಪ ಬಿಟ್ಟು ಪರಾರಿಯಾಗಿದ್ದಾರೆ ಎನ್ನಲಾಗಿದೆ. ನಂತರದಲ್ಲಿ ಯುವತಿ ನೀಡಿದ ದೂರಿನ ಮೇರೆಗೆ ಪೊಲೀಸರು ಘಟನೆ ನಡೆದ 24 ಗಂಟೆಯೊಳಗೆ ಆರೋಪಿಗಳನ್ನು ಬಂಧಿಸಿದ್ದಾರೆ. ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಟಿ. ನರಸೀಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

Most Popular