HomeKarnatakaಮದುವೆಯಾಗುವುದಾಗಿ ನಂಬಿಸಿ ಲೈಂಗಿಕ ದೌರ್ಜನ್ಯ: ಅಪರಾಧಿಗೆ 20 ವರ್ಷ ಜೈಲು ಶಿಕ್ಷೆ

ಮದುವೆಯಾಗುವುದಾಗಿ ನಂಬಿಸಿ ಲೈಂಗಿಕ ದೌರ್ಜನ್ಯ: ಅಪರಾಧಿಗೆ 20 ವರ್ಷ ಜೈಲು ಶಿಕ್ಷೆ

ಬೆಂಗಳೂರು: ಅಪ್ರಾಪ್ತ ಬಾಲಕಿಗೆ ಮದುವೆಯಾಗುವುದಾಗಿ ನಂಬಿಸಿ ಲೈಂಗಿಕ ದೌರ್ಜನ್ಯ ಎಸಗಿದ್ದ ಅಪರಾಧಿಗೆ ಎಫ್.ಟಿ.ಎಸ್.ಸಿ. ಮೂರನೇ ನ್ಯಾಯಾಲಯ 20 ವರ್ಷ ಜೈಲು ಶಿಕ್ಷೆ ವಿಧಿಸಿದೆ.

ನ್ಯಾ. ಎಸ್. ಮಹೇಶ್ ಅವರು ತೀರ್ಪು ನೀಡಿದ್ದಾರೆ. ಜೆಪಿ ನಗರದ 8ನೇ ಹಂತದ ನಿವಾಸಿ ಎಸ್. ಸುನಿಲ್(23) ಶಿಕ್ಷೆಗೊಳಗಾದ ಅಪರಾಧಿ. ಆತನಿಗೆ 20 ವರ್ಷ ಜೈಲು ಶಿಕ್ಷೆ, 50,000 ರೂ. ದಂಡ ವಿಧಿಸಲಾಗಿದೆ. ಸಂತ್ರಸ್ತ ಬಾಲಕಿಗೆ 5 ಲಕ್ಷ ರೂ. ಪರಿಹಾರ ನೀಡುವಂತೆ ಕಾನೂನು ಸೇವೆಗಳ ಪ್ರಾಧಿಕಾರಕ್ಕೆ ನ್ಯಾಯಾಧೀಶರು ಸೂಚನೆ ನೀಡಿದ್ದಾರೆ.

ಪಬ್ಲಿಕ್ ಪ್ರಾಸಕ್ಯೂಟರ್ ಗೀತಾ ಗೊರವರ ಅವರು ವಾದ ಮಂಡಿಸಿದ್ದರು. 2022 ರಲ್ಲಿ ಬಾಲಕಿಯನ್ನು ಪರಿಚಯಿಸಿಕೊಂಡಿದ್ದ ಸುನಿಲ್ 2023 ಫೆಬ್ರವರಿಯಲ್ಲಿ ಮನೆಗೆ ಕರೆಸಿಕೊಂಡು ಮದುವೆಯಾಗುವುದಾಗಿ ನಂಬಿಸಿ ಲೈಂಗಿಕ ದೌರ್ಜನ್ಯ ಎಸಗಿದ್ದ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular