ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ: ಹೆಚ್.ಡಿ.ರೇವಣ್ಣಗೆ ಸೆ.19ರವರೆಗೆ ರಿಲೀಫ್

ಬೆಂಗಳೂರು: ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕ ಹೆಚ್.ಡಿ.ರೇವಣ್ಣಗೆ ಹೈಕೋರ್ಟ್ ಮಧ್ಯಂತರ ರಿಲೀಫ್ ನೀಡಿದೆ.

ತನ್ನ ವಿರುದ್ಧದ ಪ್ರಕರಣ ರದ್ದು ಕೋರಿ ಹೆಚ್.ಡಿ.ರೇವಣ್ಣ ಸಲ್ಲಿಸಿದ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ಏಕಸದಸ್ಯಪೀಠ, ಸೆ.19ರವರೆಗೆ ಹೆಚ್.ಡಿ.ರೇವಣ್ಣ ವಿರುದ್ಧ ಯಾವುದೇ ಪ್ರಕ್ರಿಯೆ ನಡೆಸದಂತೆ ವಿಚಾರಣಾ ನ್ಯಾಯಾಲಯಕ್ಕೆ ಸೂಚನೆ ನೀಡಿದೆ.

ರೇವಣ್ಣ ಪರ ವಾದ ಮಂಡಿಸಿದ ವಕೀಲ ಸಿ.ವಿ.ನಾಗೇಶ್, ನಾಲ್ಕು ವರ್ಷಗಳ ಹಿಂದಿನ ದೂರಿಗೆ ಈಗ ಎಫ್ ಐ ಆರ್ ದಾಖಲಿಸಿದ್ದಾರೆ. ಕಲಂ 354ಎ, 354 ಡಿ ಅಡಿ ಹಳೆ ದೂರುಗಳಿಗೆ ಎಫ್ ಐ ಆರ್ ದಾಖಲಿಸುವಂತಿಲ್ಲ. ಹೀಗಾಗಿ ಎಫ್ ಐ ಆರ್ ರದ್ದು ಮಾಡುವಂತೆ ಮನವಿ ಮಾಡಿದರು.

ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ ಸರ್ಕಾರಿ ವಕೀಲ ಎಸ್ ಪಿಪಿ ರವಿವರ್ಮ ಕುಮಾರ್ ಈಗಾಗಲೇ ಆರೋಪಪಟ್ಟಿ ದಾಖಲಿಸಲಾಗಿದೆ ಎಂದು ತಿಳಿಸಿದರು. ವಾದ-ಪ್ರತಿವಾದ ಆಲಿಸಿದ ನ್ಯಾಯಾಲಯ ಸೆ.19ರವರೆಗೆ ಯಾವುದೇ ಪ್ರಕ್ರಿಯೆ ನಡೆಸದಂತೆ ವಿಚಾರಣಾ ನ್ಯಾಯಾಲಯಕ್ಕೆ ಸೂಚನೆ ನೀಡಿದೆ.

ಹೊಳೆನರಸೀಪುರ ಪೊಲೀಸ್ ಠಾಣೆಯಲ್ಲಿ ಹೆಚ್.ಡಿ.ರೇವಣ್ಣ ವಿರುದ್ಧ ಮನೆಯ ಸಹಾಯಕಿಯೊಬ್ಬರು ಲೈಂಗಿಕ ಕಿರುಕುಳ ಪ್ರಕರಣ ದಾಖಲಿಸಿದ್ದರು. ಈ ಹಿನ್ನೆಲೆಯಲ್ಲಿ ರೇವಣ್ಣ ವಿರುದ್ಧ ಎಫ್ ಐ ಆರ್ ದಾಖಲಾಗಿತ್ತು.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read