ತರಬೇತಿ ಶಿಬಿರದಲ್ಲಿ ಲೈಂಗಿಕ ಕಿರುಕುಳ: ಗೃಹರಕ್ಷಕದಳ ಕಮಾಂಡೆಂಟ್ ವಿರುದ್ಧ ಮಹಿಳಾ ಸಿಬ್ಬಂದಿ ದೂರು

ತುಮಕೂರು: ತುಮಕೂರು ಜಿಲ್ಲಾ ಗೃಹರಕ್ಷಕ ದಳದ ಕಮಾಂಡೆಂಟ್ ರಾಜೇಂದ್ರ ಅವರ ವಿರುದ್ಧ ಲೈಂಗಿಕ ಕಿರುಕುಳ ಆರೋಪ ಕೇಳಿ ಬಂದಿದೆ.

ತರಬೇತಿ ಶಿಬಿರದಲ್ಲಿ ಮಹಿಳಾ ಸಿಬ್ಬಂದಿಗೆ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಲಾಗಿದೆ. ತಪ್ಪು ಹೇಳಿಕೊಡುವ ನೆಪದಲ್ಲಿ ಮೈಮುಟ್ಟಿ ಕಿರುಕುಳ ನೀಡಿದ್ದಾರೆ. ರಾಜೇಂದ್ರ ವಿರುದ್ಧ ತರಬೇತಿಗೆ ಬಂದಿದ್ದ ಐವರು ಮಹಿಳಾ ಸಿಬ್ಬಂದಿ ದೂರು ನೀಡಿದ್ದಾರೆ.

ಜಿಲ್ಲಾಧಿಕಾರಿ, ಮಹಿಳಾ ಆಯೋಗ, ಅಗ್ನಿಶಾಮಕ ದಳ ಐಜಿಗೆ ಪತ್ರದ ಮೂಲಕ ದೂರು ನೀಡಲಾಗಿದೆ.

ದೂರಿನ ಅರ್ಜಿಯ ಜೊತೆಗೆ ಮಹಿಳಾ ಸಿಬ್ಬಂದಿ ಪೆನ್ ಡ್ರೈವ್ ದಾಖಲೆಯನ್ನು ಕೂಡ ನೀಡಿದ್ದಾರೆ. ತರಬೇತಿ ವೇಳೆ ಮಹಿಳಾ ಸಿಬ್ಬಂದಿ ಜೊತೆ ಡ್ಯಾನ್ಸ್ ಮಾಡಿದ ವಿಡಿಯೋ ವೈರಲ್ ಆಗಿದ್ದು, ರಾಜೇಂದ್ರ ವಿರುದ್ಧ ಆರೋಪ ಹಿನ್ನೆಲೆಯಲ್ಲಿ ತನಿಖೆ ನಡೆಸಿ ವರದಿ ನೀಡುವಂತೆ ತುಮಕೂರು ಎಸ್ಪಿ ಸೂಚಿಸಿದ್ದಾರೆ. ಮಧುಗಿರಿ ಡಿವೈಎಸ್ಪಿ ಮಂಜುನಾಥ್ ನೇತೃತ್ವದಲ್ಲಿ ತನಿಖಾ ತಂಡ ರಚಿಸಲಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read