HomeIndiaBREAKING : ಲೈಂಗಿಕ ಕಿರುಕುಳ ಪ್ರಕರಣ : ಬ್ರಿಜ್ ಭೂಷಣ್ ಸಿಂಗ್ ಗೆ ಷರತ್ತುಬದ್ಧ ಜಾಮೀನು...

BREAKING : ಲೈಂಗಿಕ ಕಿರುಕುಳ ಪ್ರಕರಣ : ಬ್ರಿಜ್ ಭೂಷಣ್ ಸಿಂಗ್ ಗೆ ಷರತ್ತುಬದ್ಧ ಜಾಮೀನು ಮಂಜೂರು

ನವದೆಹಲಿ: ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣದಲ್ಲಿ ಡಬ್ಲ್ಯುಎಫ್ಐ ಮಾಜಿ ಮುಖ್ಯಸ್ಥ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರಿಗೆ ದೆಹಲಿ ನ್ಯಾಯಾಲಯ ಷರತ್ತುಬದ್ದ ಜಾಮೀನು ಮಂಜೂರು ಮಾಡಿದೆ.

ಜುಲೈ 18ರಂದು ನ್ಯಾಯಾಲಯ ಬ್ರಿಜ್ ಭೂಷಣ್ಗೆ ಮಧ್ಯಂತರ ಜಾಮೀನು ನೀಡಿತ್ತು. ಇದೀಗ ಅವರಿಗೆ ಬಿಗ್ ರಿಲೀಫ್ ಸಿಕ್ಕಿದ್ದು, ಲೈಂಗಿಕ ಕಿರುಕುಳ ಪ್ರಕರಣದಲ್ಲಿ ನಿತ್ಯ ಜಾಮೀನಿನ ಮೇಲೆ ಹೊರ ಬರಲಿದ್ದಾರೆ.
ಬ್ರಿಜ್ ಭೂಷಣ್ ಸಿಂಗ್ ಮತ್ತು ವಿನೋದ್ ತೋಮರ್ ಅವರಿಗೆ ತಲಾ 25,000 ರೂಪಾಯಿಗಳ ಶ್ಯೂರಿಟಿಯ ಮೇಲೆ ನ್ಯಾಯಾಲಯ ಷರತ್ತುಬದ್ಧ ಜಾಮೀನು ನೀಡಿದೆ.ಅನುಮತಿ ಇಲ್ಲದೇ ವಿದೇಶ ಪ್ರವಾಸಕ್ಕೆ ಹೋಗುವ ಹಾಗೆ ಇಲ್ಲ ಎಂದು ಕೋರ್ಟ್ ಷರತ್ತು ವಿಧಿಸಿದೆ. ಪ್ರಕರಣದ ವಿಚಾರಣೆಯನ್ನು ಜುಲೈ 28ಕ್ಕೆ ಮುಂದೂಡಿದೆ.

ಆರು ಬಾರಿ ಸಂಸದರಾಗಿರುವ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧ ಐಪಿಸಿ ಸೆಕ್ಷನ್ 354 (ಮಹಿಳೆಯ ಘನತೆಗೆ ಧಕ್ಕೆ ತರುವ ಉದ್ದೇಶದಿಂದ ಹಲ್ಲೆ ಅಥವಾ ಕ್ರಿಮಿನಲ್ ಬಲಪ್ರಯೋಗ), 354 ಎ (ಲೈಂಗಿಕ ಕಿರುಕುಳ), 354 ಡಿ (ಹಿಂಬಾಲಿಸುವುದು) ಮತ್ತು 506 (ಕ್ರಿಮಿನಲ್ ಬೆದರಿಕೆ) ಅಡಿಯಲ್ಲಿ ಚಾರ್ಜ್ ಶೀಟ್ ದಾಖಲಿಸಲಾಗಿದೆ. ತೋಮರ್ ವಿರುದ್ಧ ಐಪಿಸಿ ಸೆಕ್ಷನ್ 109 (ಯಾವುದೇ ಅಪರಾಧಕ್ಕೆ ಪ್ರಚೋದನೆ), 354, 354 ಎ ಮತ್ತು 506 (ಕ್ರಿಮಿನಲ್ ಬೆದರಿಕೆ) ಅಡಿಯಲ್ಲಿ ಆರೋಪಗಳನ್ನು ಹೊರಿಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular