ಅಂಗಡಿಗೆ ತೆರಳಿದ್ದ ಬಾಲಕಿಗೆ ವೃದ್ಧ ವ್ಯಾಪಾರಿಯಿಂದ ಲೈಂಗಿಕ ಕಿರುಕುಳ; ಆಘಾತಕಾರಿ ಕೃತ್ಯ ಮೊಬೈಲ್‌ ನಲ್ಲಿ ಸೆರೆ

ಉತ್ತರ ಪ್ರದೇಶದ ಸೀತಾಪುರದಲ್ಲಿ ನಡೆದ ಆಘಾತಕಾರಿ ಘಟನೆಯೊಂದರಲ್ಲಿ ಅಂಗಡಿಯಲ್ಲಿದ್ದ ವೃದ್ಧ ವ್ಯಾಪಾರಿ ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ್ದಾನೆ. ಈ ಆರೋಪದ ಮೇಲೆ 70 ವರ್ಷದ ಮೊಹಮ್ಮದ್ ಅನ್ವರ್ ಎಂಬಾತನನ್ನು ಬಂಧಿಸಲಾಗಿದೆ.

ಸೆಪ್ಟೆಂಬರ್ 3 ರಂದು ಬಾಲಕಿ ಅನ್ವರ್ ಅಂಗಡಿಗೆ ಗೃಹೋಪಯೋಗಿ ವಸ್ತುಗಳನ್ನು ಖರೀದಿಸಲು ಭೇಟಿ ನೀಡಿದಾಗ ಈ ಘಟನೆ ನಡೆದಿದೆ. ಈ ಘಟನೆಯ ವಿಡಿಯೋ ವೈರಲ್ ಆಗಿದ್ದು, ಸ್ಥಳೀಯ ಸಮುದಾಯ ಮತ್ತು ಸಾಮಾಜಿಕ ಮಾಧ್ಯಮ ಬಳಕೆದಾರರನ್ನು ಬೆಚ್ಚಿಬೀಳಿಸಿದೆ.

ಸಂತ್ರಸ್ತೆಯ ಬುಡಕಟ್ಟು ಹಿನ್ನೆಲೆಯ ಕಾರಣದಿಂದ ಆತನ ವಿರುದ್ಧ ಲೈಂಗಿಕ ಅಪರಾಧಗಳಿಂದ ಮಕ್ಕಳ ಕಟ್ಟುನಿಟ್ಟಿನ ರಕ್ಷಣೆ (ಪೋಕ್ಸೊ) ಕಾಯ್ದೆ ಮತ್ತು ಎಸ್‌ಸಿ/ಎಸ್‌ಟಿ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ. ಈ ವಿಡಿಯೋ ನೋಡಿದ ಸಾರ್ವಜನಿಕರು ಮಕ್ಕಳನ್ನು ಅಂಗಡಿಗೆ ಕಳಿಸಲು ಹಿಂಜರಿಯುವಂತಾಗಿದೆ.

https://twitter.com/lakshaymehta31/status/1831329657309761679?ref_src=twsrc%5Etfw%7Ctwcamp%5Etweetembed%7Ctwterm%5E1831329657309761679%7Ctwgr%5Ec195be3a4d39c4

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read