ಬೆಂಗಳೂರು : ಬೆಂಗಳೂರಲ್ಲಿ ಬೀದಿ ಕಾಮಣ್ಣರ ಹಾವಳಿ ಮುಂದುವರೆದಿದೆ. ಪಿ.ಜಿಗೆ ಹೋಗುತ್ತಿದ್ದ ವೈದ್ಯೆಯನ್ನು ಹಿಂಬಾಲಿಸಿ ಲೈಂಗಿಕ ಕಿರುಕುಳ ನೀಡಿದ ಕಾಮುಕನೋರ್ವ ಇದೀಗ ಪೊಲೀಸರ ಅತಿಥಿಯಾಗಿದ್ದಾನೆ.
ಯೆಸ್, ಚಿಕ್ಕಬಾಣಾವರದ ಎಜಿಬಿ ಲೇಔಟ್ ಬಳಿ ಈ ಘಟನೆ ನಡೆದಿದೆ. ಸೋಲದೇವನಹಳ್ಳಿ ಪೊಲೀಸರು ಆರೋಪಿ ರಾಕೇಶ್ ನನ್ನು ಬಂಧಿಸಿದ್ದಾರೆ. ವೈದ್ಯೆ ನೀಡಿದ ದೂರಿನ ಮೇರೆಗೆ ಪೊಲೀಸರು ಎಫ್ ಐ ಆರ್ ದಾಖಲಿಸಿಕೊಂಡಿದ್ದರು. ಇದೀಗ ಆರೋಪಿ ರಾಕೇಶ್ ನ್ನು ಪೊಲೀಸರು ಬಂಧಿಸಿದ್ದಾರೆ.
ಬೈಕ್ ನಲ್ಲಿ ಬಂದ ಕಾಮುಕ ರಾಕೇಶ್ ವೈದ್ಯೆಯನ್ನು ತಬ್ಬಿಕೊಂಡು ಲೈಂಗಿಕ ಕಿರುಕುಳ ನೀಡಿದ್ದಾನೆ. ವೈದ್ಯೆ ಜೋರಾಗಿ ಕಿರುಚಿಕೊಂಡಾಗ ಕಾಮುಕ ಸ್ಥಳದಿಂದ ಕಾಲ್ಕಿತ್ತಿದ್ದಾನೆ . ಸಿಸಿಟಿವಿಯಲ್ಲಿ ಈ ದೃಶ್ಯ ಸೆರೆಯಾಗಿದ್ದು, ವಿಡಿಯೋ ವೈರಲ್ ಆಗಿದೆ. ವೈದ್ಯೆ ನೀಡಿದ ದೂರಿನ ಮೇರೆಗೆ ಪೊಲೀಸರು ಎಫ್ ಐ ಆರ್ ದಾಖಲಿಸಿಕೊಂಡಿದ್ದರು. ಇದೀಗ ಆರೋಪಿ ರಾಕೇಶ್ ನ್ನು ಪೊಲೀಸರು ಬಂಧಿಸಿದ್ದಾರೆ.

