ಬೆಂಗಳೂರು : ದುಷ್ಕರ್ಮಿಯೋರ್ವ ಮಹಿಳೆಗೆ ಖಾಸಗಿ ಅಂಗ ತೋರಿಸಿ ಲೈಂಗಿಕ ಕಿರುಕುಳ ನೀಡಿದ್ದು, ಪೊಲೀಸರು ಎಫ್ ಐ ಆರ್ ದಾಖಲಿಸಿದ್ದಾರೆ.
ಬೆಂಗಳೂರಿನ ಇಂದಿರಾನಗರದಲ್ಲಿ ಈ ಘಟನೆ ನಡೆದಿದೆ. ಮಹಿಳೆ ನೀಡಿದ ದೂರಿನ ಮೇರೆಗೆ ಅಪರಿಚಿತ ವ್ಯಕ್ತಿ ವಿರುದ್ಧ ಎಫ್ ಐ ಆರ್ ದಾಖಲಿಸಲಾಗಿದೆ.
ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಮಹಿಳೆಗೆ ವ್ಯಕ್ತಿಯೋರ್ವ ಅಡ್ಡ ಬಂದು ತನ್ನ ಪ್ಯಾಂಟ್ ಜಿಪ್ ಓಪನ್ ಮಾಡಿ ಖಾಸಗಿ ಅಂಗ ತೋರಿಸಿ ಲೈಂಗಿಕ ಕಿರುಕುಳ ನೀಡಿದ್ದಾನೆ. ಮಹಿಳೆ ನೀಡಿದ ದೂರಿನ ಮೇರೆಗೆ ಇಂದಿರಾನಗರ ಪೊಲೀಸರು ಎಫ್ ಐ ಆರ್ ದಾಖಲಿಸಿ ಆರೋಪಿ ಪತ್ತೆಗೆ ಬಲೆ ಬೀಸಿದ್ದಾರೆ.
