HomeKarnatakaBIG NEWS: ಮಾಜಿ ಸಿಎಂ ಯಡಿಯೂರಪ್ಪ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ; ದೂರುದಾರೆ ಸಾವು

BIG NEWS: ಮಾಜಿ ಸಿಎಂ ಯಡಿಯೂರಪ್ಪ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ; ದೂರುದಾರೆ ಸಾವು

ಬೆಂಗಳೂರು: ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ವಿರುದ್ಧ ಲೈಂಗಿಕ ದೌರ್ಜನ್ಯದ ಆರೋಪ ಮಾಡಿದ್ದ ದೂರುದಾರೆ ಅನಾರೋಗ್ಯದಿಂದ ಮೃತಪಟ್ಟಿದ್ದಾರೆ.

ಕೆಲ ದಿನಗಳ ಹಿಂದೆ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ವಿರುದ್ಧ ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯವೆಸಗಿರುವ ಆರೋಪ ಮಾಡಿ ದೂರು ನೀಡಿದ್ದರು. ಈ ಹಿನ್ನೆಲೆಯಲ್ಲಿ ಯಡಿಯೂರಪ್ಪ ವಿರುದ್ಧ ಪೋಕ್ಸೋ ಹಾಗೂ 354 (A) ಡಿ ದೂರು ದಾಖಲಿಸಿಕೊಂಡ ಪೊಲೀಸರು ಎಫ್ಐಆರ್ ದಾಖಲಿಸಿದ್ದರು. ಆದರೀಗ ದೂರುದಾರೆ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.

ದೂರುದಾರೆ ಕಳೆದ ಕೆಲ ವರ್ಷಗಳಿಂದ ಮಾರಣಂತಿಕ ಕಾಯಿಲೆಯಿಂದ ಬಳಲುತ್ತಿದ್ದರು. ಬನ್ನೇರುಘಟ್ಟ ರಸ್ತೆಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಇದೀಗ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular