HomeLatest NewsBIG NEWS: ಲೈಂಗಿಕ ಕಿರುಕುಳ: ಯೂಟ್ಯೂಬರ್ ಸೂರ್ಯ ವಿರುದ್ಧ ದೂರು ದಾಖಲು

BIG NEWS: ಲೈಂಗಿಕ ಕಿರುಕುಳ: ಯೂಟ್ಯೂಬರ್ ಸೂರ್ಯ ವಿರುದ್ಧ ದೂರು ದಾಖಲು

ಬೆಂಗಳೂರು: ಯುವತಿಗೆ ಲೈಂಗಿಕ ಕಿರುಕುಳ ನೀಡಿರುವ ಆರೋಪದಲ್ಲಿ ಯೂಟ್ಯೂಬರ್ ಸೂರ್ಯ ವಿರುದ್ಧ ದೂರು ದಾಖಲಾಗಿದೆ.

ಸಂತ್ರಸ್ತ ಯುವತಿ ನೀಡಿದ ದೂರಿನ ಹಿನ್ನೆಲೆಯಲ್ಲಿ ಬೆಂಗಳೂರಿನ ಕೋಣನಕುಂಟೆ ಪೊಲೀಸ್ ಠಾಣೆಯಲ್ಲಿ ಯೂಟ್ಯೂಬರ್ ವಿ2 ಸೂರ್ಯ ವಿರುದ್ಧ ಪ್ರಕರಣ ದಾಖಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ದೇವಸ್ಥಾನವೊಂದರ ಬಳಿ ಯುವತಿಗೆ ಪರಿಚಯನಾಗಿದ್ದ ಯೂಟ್ಯೂಬರ್ ಸೂರ್ಯ, ಯುವತಿಯ ಸೋಷಿಯಲ್ ಮೀಡಿಯಾಗಳನ್ನು ಹ್ಯಾಕ್ ಮಾಡಿ ಖಾಸಗಿ ಫೋಟೋಗಳನ್ನು ಕದ್ದಿದ್ದ. ಬಳಿಕ ಫೋಟೋಗಳನ್ನು ಇಟ್ಟುಕೊಂಡು ಬೆದರಿಸುತ್ತಿದ್ದ. ಇದೇ ವಿಚಾರವಾಗಿ ಮಾತುಕತೆಗೆಂದು ಯುವತಿಯನ್ನು ಮನೆಗೆ ಕರೆದುಕೊಂಡು ಹೋಗಿ ಲೈಂಗಿಕ ಕಿರುಕುಳ ನೀಡಿದ್ದಾನೆ. ಯುವತಿ ಸಹಕರಿಸದಿದ್ದಾಗ ಆಕೆಯ ಮೇಲೆ ಹಲ್ಲೆ ನಡೆಸಿದ್ದಾನೆ. ಯುವತಿಯ ಮೊಬೈಲ್ ಕಿತ್ತುಕೊಂಡು ಒಡೆದು ಹಾಕಿದ್ದಾನೆ.

ಬಳಿಕ ಮಾನಹಾನಿ ಮಾಡುವುದಾಗಿ ಬೆದರಿಕೆ ಹಾಕಿ ಹಣಕ್ಕೆ ಬೇಡಿಕೆ ಇಟ್ಟಿದ್ದಾನೆ. ಯುವತಿಯ ತಂದೆ-ತಾಯಿ ಕುಟುಂಬದವರಿಗೂ ಕರೆ ಮಾಡಿ ಅವಾಚ್ಯವಾಗಿ ನಿಂದಿಸಿದ್ದಾನೆ ಎಂದು ಯುವತಿ ದೂರು ನೀಡಿದ್ದಾರೆ. ಸೂರ್ಯ ವಿರುದ್ಧ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆಗೆ ಮುಂದಾಗಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular