ತಿವನಂತಪುರಂ: ಶಬರಿಮಲೆ ಅಯ್ಯಪ್ಪಸ್ವಾಮಿ ದೇವಸ್ಥಾನದ ಚಿನ್ನ ನಾಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ತಿರುವಾಂಕೂರು ದೇವಸ್ವಂ (ಟಿಡಿಬಿ) ಮಂಡಳಿ ಮಾಜಿ ಅಧ್ಯಕ್ಷ ಎ.ಪದ್ಮಕುಮಾರ್ ಅವರನ್ನು ಎಸ್ ಐಟಿ ವಶಕ್ಕೆ ನೀಡಿ ಕೇರಳ ಹೈಕೋರ್ಟ್ ಆದೇಶ ನೀಡಿದೆ.
ಮಾಜಿ ಶಾಸಕರೂ ಆಗಿರುವ ಪದ್ಮಕುಮಾರ್ ಅವರನ್ನು ಎಸ್ ಐಟಿ ತೀವ್ರ ವಿಚಾರಣೆಗೊಳಪಡಿಸಿತ್ತು. ಬಳಿಕ ಕೋರ್ಟ್ ಗೆ ಹಾಜರುಪಡಿಸಲಾಗಿತ್ತು. ಈ ವೇಳೆ ಎರಡು ದಿನಗಳ ಕಾಲ ಎಸ್ ಐಟಿ ವಶಕ್ಕೆ ನೋಡಿ ಕೇರಳ ಹೈಕೋರ್ಟ್ ಆದೇಶ ಹೊರಡಿಸಿದೆ.
ಶಬರಿಮೆ ಅಯ್ಯಪ್ಪ ದೇವಸ್ಥಾನದ ದ್ವಾರಪಾಲಕ ಮೂರ್ತಿಗಳ ಚಿನ್ನ ಲೇಪಿತ ತಾಮ್ರದ ಕವಚಗಳು ಮತ್ತು ಶ್ರೋಕೋವಿಲ್ (ಗರ್ಭಗುಡಿ) ಬಾಗಿಲಿನ ಚೌಕಟ್ಟುಗಳನ್ನು ಚಿನ್ನ ಲೇಪನನಕ್ಕಾಗಿ ಪ್ರಮುಖ ಆರೋಪಿ ಉನ್ನಿಕೃಷ್ಣ ಪೋಟಿ ಅವರಿಗೆ ಹಸ್ತಾಂತರಿಸುವ ಪ್ರಸ್ತಾವವನ್ನು ಮಂಡಳಿ ಪರಿಗಣಿಸಿದ್ದ 2019ರ ಸಂದರ್ಭದಲ್ಲಿ ಪದ್ಮಕುಮಾರ್ ಟಿಡಿಬಿ ಅಧ್ಯಕ್ಷರಾಗಿದ್ದರು ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
