ತಿರುವನಂತಪುರಂ: ಶಬರಿಮಲೆ ಐಯ್ಯಪ್ಪ ಸ್ವಾಮಿ ದೇವಸ್ಥಾನದ ಚಿನ್ನ ಕಳುವು ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿಯನ್ನು ಎಸ್ ಐಟಿ ಅಧಿಕಾರಿಗಳು ಬಂಧಿಸಿದ್ದಾರೆ.
ಶಬರಿಮಲೆ ದೇವಸ್ಥಾನದ ಸ್ವರ್ಣ ಲೇಪಿತ ತಾಮ್ರದ ದ್ವಾರಪಾಲಕರ ಮೂರ್ತಿಗಳಲ್ಲಿನ ಬಂಗಾರದ ತೂಕದಲ್ಲಿ ಕಡಿಮೆಯಾದ ಪ್ರಕರಣದಲ್ಲಿ ಪ್ರಮುಖ ಆರೋಪಿ ಉಣ್ಣಿಕೃಷ್ಣನ್ ಪೋಟಿಯನ್ನು ಬಂಧಿಸಲಾಗಿದೆ.
ಬೆಂಗಳೂರು ಮೂಲದ ಉದ್ಯಮಿ ಆಗಿರುವ ಉಣ್ಣಿಕೃಷ್ಣನ್ ಪೋಟಿಯನ್ನು ಎಸ್ ಐಟಿ ಅಧಿಕಾರಿಗಳು ನಿನ್ನೆ ತಿರುವನಂತಪುರಂ ನಲ್ಲಿ ತೀವ್ರ ವಿಚಾರಣೆಗೆ ಒಳಪಡಿಸಿದ್ದರು. ವಿಚಾರಣೆ ಬಳಿಕ ಇಂದು ಬಂಧಿಸಲಾಗಿದೆ. ವದ್ಯಕೀಯ ತಪಾಸಣೆಗೆ ಕರೆದೊಯ್ಯಲಾಗಿದೆ.
ಇಂದು ಮಧ್ಯಾಹ್ನದ ವೇಳೆಗೆ ಆರೋಪಿ ಉನ್ನಿಕೃಷ್ಣನ್ ಪೋಟಿಯನ್ನು ಪತ್ತನಂತಿಟ್ಟದ ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.