HomeIndiaಕರ್ನಾಟಕದ ಅಯ್ಯಪ್ಪ ಮಾಲಾಧಾರಿಗಳನ್ನು 100 ಕಿ.ಮೀ ದೂರದಲ್ಲೇ ತಡೆದ ಕೇರಳ ಪೊಲೀಸರು

ಕರ್ನಾಟಕದ ಅಯ್ಯಪ್ಪ ಮಾಲಾಧಾರಿಗಳನ್ನು 100 ಕಿ.ಮೀ ದೂರದಲ್ಲೇ ತಡೆದ ಕೇರಳ ಪೊಲೀಸರು

ತಿರುವನಂತಪುರಂ: ಶಬರಿಮಲೆ ಅಯ್ಯಪ್ಪಸ್ವಾಮಿ ದರ್ಶನಕ್ಕೆ ತೆರಳಿರುವ ಕರ್ನಾಟಕದ 5000ಕ್ಕೂ ಹೆಚ್ಚು ಅಯ್ಯಪ್ಪ ಮಾಲಾಧಾರಿಗಳನ್ನು ಕೇರಳ ಪೊಲೀಸರು ಮಾರ್ಗ ಮಧ್ಯೆಯೇ ತಡೆದಿರುವ ಘಟನೆ ನಡೆದಿದೆ.

ಚಿಕ್ಕಮಗಳೂರು ಜಿಲ್ಲೆಯಿಂದ ಸಾವಿರಾರು ಅಯ್ಯಪ್ಪ ಮಾಲಾಧಾರಿಗಳು ಅಯ್ಯಪ್ಪ ದರ್ಶನಕ್ಕೆ ತೆರಳಿದ್ದು, ಕರ್ನಾಟಕದ ಮಲಾಧಾರಿಗಳ ವಾಹನಗಳನ್ನು ಶಬರಿಮಲೆಯಿಂದ ಸುಮಾರು 100 ಕಿ.ಮೀ ದೂರದಲ್ಲಿಯೇ ತಡೆಯಲಾಗುತ್ತಿದೆ. ಕೇರಳ ಪೊಲೀಸರು ಕರ್ನಾಟಕದ ಅಯ್ಯಪ್ಪ ಮಾಲಾಧಾರಿಗಳ ವಾಹನಗಳನ್ನು ಮಾತ್ರ ತಡೆಯುತ್ತಿದ್ದು, ಅಯ್ಯಪ್ಪ ಮಾಲಾಧಾರಿಗಳು ಕೇರಳ ಪೊಲೀಸರ ವಿರುದ್ಧ ರಸ್ತೆಯಲ್ಲಿಯೇ ಕುಳಿತು ಪ್ರತಿಭಟನೆ ನಡೆಸಿದ್ದಾರೆ.

ಕರ್ನಾಟಕದ ಅಯ್ಯಪ್ಪ ಮಾಲಾಧಾರಿಗಳ ವಾಹನಗಳನ್ನು ಎರಿಮಲೆಯಲ್ಲಿ ಕೇರಳ ಪೊಲೀಸರು ತಡೆಯುತ್ತಿದ್ದು, ಅಲ್ಲಿಂದ ಮುಂದಕ್ಕೆ ಕೆರಳದ ವಾಹನಗಳಲ್ಲಿ ತೆರಳುವಂತೆ ಸೂಚಿಸುತ್ತಿದ್ದಾರೆ. ಕರ್ನಾಟಕದ ಅಯ್ಯಪ್ಪ ಮಾಲಾಧಾರಿಗಳ ವಾಹನಗಳನ್ನು ಮಾತ್ರ ತಡೆಯುತ್ತಿದ್ದು, ಬೇರೆ ರಾಜ್ಯಗಳ ವಾಹನಗಳನ್ನು ಬಿಡುತ್ತಿದ್ದಾರೆ ಎಂದು ಮಾಲಾಧಾರಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅಲ್ಲದೇ ಕೇರಳ ಬಸ್ ಗಳಿಗೆ ಮನಬಂದಂತೆ ಟಿಕೆಟ್ ದರ ನಿಗದಿ ಮಾಡಿ ವಸೂಲಿ ಮಾಡುತ್ತಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಚಿಕ್ಕಮಕ್ಕಳು, ಹಿರಿಯ ಮಾಲಾಧಾರಿಗಳು ಇರುಮುಡಿ ಹೊತ್ತು ರಸ್ತೆಯಲ್ಲಿಯೇ ಪ್ರತಿಭಟನೆ ನಡೆಸಿದ್ದಾರೆ. ಈ ಬಗ್ಗೆ ರಾಜ್ಯ ಸರ್ಕಾರ ತಕ್ಷಣ ಗಮನಹರಿಸಿ, ಅಯ್ಯಪ್ಪ ಮಾಲಾಧಾರಿಗಳಿಗೆ ಅನುಕೂಲ ಮಾಡಿಕೊಡುವಂತೆ ಒತ್ತಾಯಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular