ನವದೆಹಲಿಯಲ್ಲಿ ಇಬ್ಬರು ಆರೋಪಿಗಳನ್ನು ಬಂಧಿಸಲು ತೆರಳಿದ್ದ ಮಹಿಳಾ ಪೊಲೀಸ್ ಅಧಿಕಾರಿಯೊಬ್ಬರಿಗೆ ಪುರುಷನೊಬ್ಬ ಕಿರುಕುಳ ನೀಡಿದ ಘಟನೆ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಕರ್ತವ್ಯದಲ್ಲಿದ್ದ ಮಹಿಳಾ ಅಧಿಕಾರಿಯನ್ನು ಆ ವ್ಯಕ್ತಿ ಅವಮಾನಿಸುತ್ತಿರುವ ದೃಶ್ಯಗಳು ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ.
ನೀಲಿ ಬಣ್ಣದ ಅಂಗಿ ಧರಿಸಿದ ವ್ಯಕ್ತಿಯೊಬ್ಬ ಮಹಿಳಾ ಕಾನ್‌ಸ್ಟೆಬಲ್‌ನನ್ನು ಹಿಡಿದು ತಳ್ಳಾಡುತ್ತಿರುವ ವಿಡಿಯೋವನ್ನು ಅನೇಕ ಮಂದಿ ಹಂಚಿಕೊಂಡಿದ್ದು, ಇದು ಸಾರ್ವಜನಿಕರ ಕೆರಳಿಸಿದೆ. ಈ ಹೇಯ ಕೃತ್ಯವನ್ನು ಖಂಡಿಸಿ ನೆಟ್ಟಿಗರು ತೀವ್ರವಾಗಿ ಪ್ರತಿಕ್ರಿಯಿಸುತ್ತಿದ್ದಾರೆ.
ಒಬ್ಬ ಬಳಕೆದಾರರು ಇದು ನಾಚಿಕೆಗೇಡಿನ ಕೃತ್ಯ ಎಂದು ಹೇಳಿದರೆ, ಮತ್ತೊಬ್ಬರು ಈ ಪುಂಡನಿಗೆ ಕಠಿಣ ಶಿಕ್ಷೆಯಾಗಬೇಕು ಎಂದು ಆಗ್ರಹಿಸಿದ್ದಾರೆ. ಕಾನೂನು ಸುವ್ಯವಸ್ಥೆಗೆ ಸವಾಲೆಸೆದ ಈ ವ್ಯಕ್ತಿಯ ವಿರುದ್ಧ ತಕ್ಷಣ ಕ್ರಮ ಕೈಗೊಳ್ಳಬೇಕೆಂದು ಸಾರ್ವಜನಿಕರು ಒತ್ತಾಯಿಸುತ್ತಿದ್ದಾರೆ. ಮಹಿಳಾ ಪೊಲೀಸರಿಗೂ ರಕ್ಷಣೆ ಇಲ್ಲದಂತಾಗಿರುವುದು ಆತಂಕಕಾರಿ ವಿಷಯ ಎಂದು ಹಲವರು ಅಭಿಪ್ರಾಯಪಟ್ಟಿದ್ದಾರೆ. ಈ ಘಟನೆಗೆ ಸಂಬಂಧಿಸಿದಂತೆ ಪೊಲೀಸರು ಯಾವ ಕ್ರಮ ಕೈಗೊಳ್ಳುತ್ತಾರೆ ಎಂಬುದನ್ನು ಕಾದು ನೋಡಬೇಕಿದೆ.
What is this man in the blue shirt doing to the lady constable? There’s no shortage of perverts in this country. It’s no surprise we’ve earned the disgraceful title of the rape capital of the world.
— DigitalSanghi🚩 (@digitalsangghi) April 9, 2025
And yet, no one here even seems to feel ashamed. pic.twitter.com/WfFliz0ZxT