ಅನಂತ್ ಅಂಬಾನಿ ಮತ್ತು ರಾಧಿಕಾ ಮದುವೆ ಕಾರ್ಯಕ್ರಮಗಳು ಬಹಳ ಅದ್ದೂರಿಯಾಗಿ ನಡೆಯುತ್ತಿದೆ.
ಮೂರು ದಿನಗಳ ಉತ್ಸವದ ಎರಡನೇ ದಿನ ಬಾಲಿವುಡ್ ನಟರಾದ ಶಾರುಖ್ ಖಾನ್, ಸಲ್ಮಾನ್ ಖಾನ್ ಮತ್ತು ಅಮೀರ್ ಖಾನ್ ಅವರು ಒಂದೇ ವೇದಿಕೆಯಲ್ಲಿ ಕಾಣಿಸಿಕೊಂಡರು. ಅವರ ಪ್ರದರ್ಶನದ ವೀಡಿಯೊ ಈಗ ವೈರಲ್ ಆಗುತ್ತಿದೆ.
ವೇದಿಕೆಗೆ ಆಗಮಿಸಿದ ನಟ ಶಾರೂಖ್ ಖಾನ್ ಜೈ ಶ್ರೀ ರಾಮ್ ಎಂದು ಹೇಳಿ, ಎಲ್ಲರಿಗೂ ಒಳ್ಳೆಯದಾಗಲಿ ಎಂದು ಹಾರೈಸಿದರು. ನಂತರ ಡ್ಯಾನ್ಸ್ ಮಾಡಿ ಎಲ್ಲರ ಗಮನ ಸೆಳೆದರು. ಶಾರುಖ್ ಖಾನ್, ಸಲ್ಮಾನ್ ಖಾನ್ ಮತ್ತು ಅಮೀರ್ ಖಾನ್ ನಾಟೂ ನಾಟೂ ಹಾಡಿಗೆ ನೃತ್ಯ ಮಾಡಿ ಅಭಿಮಾನಿಗಳನ್ನು ರಂಜಿಸಿದರು.
ಸಾಂಪ್ರದಾಯಿಕ ಕುರ್ತಾ ಧರಿಸಿದ ಮೂವರು ಖಾನ್ ಗಳು ತಮ್ಮ ನೃತ್ಯಗಳಿಂದ ಪ್ರೇಕ್ಷಕರನ್ನು ಮಂತ್ರಮುಗ್ಧಗೊಳಿಸಿದರು, ‘ಚೈಯ್ಯ ಚೈಯ್ಯ’, ‘ಜೀನೆ ಕೆ ಹೈ ಚಾರ್ ದಿನ್’ ಮತ್ತು ‘ಮಾಸ್ತಿ ಕಿ ಪಾಠಶಾಲಾ’ ಸೇರಿದಂತೆ ತಮ್ಮದೇ ಆದ ಹಿಟ್ ಹಾಡುಗಳಿಗೆ ಹೆಜ್ಜೆ ಹಾಕುವ ಮೂಲಕ ಗಮನ ಸೆಳೆದರು. ಈ ವಿಡಿಯೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.
https://twitter.com/i/status/1764051947856736680
https://twitter.com/i/status/1764048489372065981