ಮುಂಬೈ: ಭಾರತೀಯ ಚಿತ್ರರಂಗದ ಖ್ಯಾತ ಗಾಯಕಿ ಆಶಾ ಭೋಸ್ಲೆ(92) ವಿಧಿವಶರಾಗಿದ್ದಾರೆ. ವಯೋಸಹಜ ಕಾಯಿಲೆ ಮತ್ತು ಹೃದಯ ಸೋಂಕಿನಿಂದ ಬಳಲುತ್ತಿದ್ದ ಆಶಾ ಭೋಸ್ಲೆ ಅವರಿಗೆ ನಿನ್ನೆ ಹೃದಯಾಘಾತವಾಗಿದ್ದು, ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಇಂದು ಕೊನೆಯುಸಿರೆಳೆದಿದ್ದಾರೆ. ಆಶಾ ಭೋಸ್ಲೆ ಅವರ ನಿಧನಕ್ಕೆ ನಟ ಶಾರುಖ್ ಖಾನ್ ಸಂತಾಪ ಸೂಚಿಸಿದ್ದಾರೆ
ಆಶಾ ತಾಯಿ ಅವರ ನಿಧನದ ಸುದ್ದಿ ಕೇಳಿ ನಿಜಕ್ಕೂ ದುಃಖವಾಯಿತು… ಅವರ ಧ್ವನಿ ಭಾರತೀಯ ಸಿನಿಮಾದ ಆಧಾರ ಸ್ತಂಭಗಳಲ್ಲಿ ಒಂದಾಗಿದೆ ಮತ್ತು ಮುಂಬರುವ ಶತಮಾನಗಳವರೆಗೆ ಪ್ರಪಂಚದಾದ್ಯಂತ ಪ್ರತಿಧ್ವನಿಸುತ್ತಲೇ ಇರುತ್ತದೆ. ಅನೇಕರನ್ನು ಮೀರಿಸುವಂತಹ ಪ್ರತಿಭೆ, ಅವರು ಯಾವಾಗಲೂ ನನಗೆ ಆಶೀರ್ವಾದ ಮತ್ತು ಪ್ರೀತಿಯನ್ನು ನೀಡುತ್ತಿದ್ದರು ಮತ್ತು ನಾನು ಅವರನ್ನು ಕಳೆದುಕೊಳ್ಳುತ್ತೇನೆ. ಶಾಂತಿಯಿಂದ ವಿಶ್ರಾಂತಿ ಪಡೆಯಿರಿ ಎಂದು ಶಾರುಖ್ ಖಾನ್ ತಿಳಿಸಿದ್ದಾರೆ.

