ರಷ್ಯಾ ಸೇರಿದಂತೆ CIS ದೇಶದ 3 ಸಾವಿರಕ್ಕೂ ಹೆಚ್ಚು ಸ್ಕ್ರೀನ್ ಗಳಲ್ಲಿ ಬಿಡುಗಡೆಯಾಗಲಿದೆ ಶಾರುಖ್ ಖಾನ್ ಸೂಪರ್ ಹಿಟ್ ಚಿತ್ರ ‘ಪಠಾಣ್’

ಬಾಲಿವುಡ್ ಬಾದ್ ಶಾ ಶಾರುಖ್ ಖಾನ್ ಅವರ ಬ್ಲಾಕ್‌ಬಸ್ಟರ್ ಪತ್ತೇದಾರಿ ಸಿನಿಮಾ ಪಠಾಣ್ ರಷ್ಯಾ ಮತ್ತು ಕಾಮನ್‌ವೆಲ್ತ್ ಆಫ್ ಇಂಡಿಪೆಂಡೆಂಟ್ ಸ್ಟೇಟ್ಸ್ (ಸಿಐಎಸ್) ದೇಶದಾದ್ಯಂತ 3 ಸಾವಿರಕ್ಕೂ ಹೆಚ್ಚು ಸ್ಕ್ರೀನ್‌ಗಳಲ್ಲಿ ಬಿಡುಗಡೆಯಾಗಲಿದೆ. ಜುಲೈ 13 ರಿಂದ ರಷ್ಯಾ ಮತ್ತು ಕಾಮನ್‌ವೆಲ್ತ್ ಆಫ್ ಇಂಡಿಪೆಂಡೆಂಟ್ ಸ್ಟೇಟ್ಸ್ ಗಳಾದ ಅರ್ಮೇನಿಯಾ, ಅಜೆರ್ಬೈಜಾನ್, ಬೆಲಾರಸ್, ಜಾರ್ಜಿಯಾ, ಕಜಕಿಸ್ತಾನ್, ಕಿರ್ಗಿಸ್ತಾನ್ ಮತ್ತು ಉಜ್ಬೇಕಿಸ್ತಾನ್ ನಲ್ಲಿ ಬಿಡುಗಡೆಯಾಗಲಿದೆ.

ಯಶ್ ರಾಜ್ ಫಿಲ್ಮ್ಸ್ ಬ್ಯಾನರ್ ನಡಿ ನಿರ್ಮಾಣವಾಗಿರುವ ಈ ಸಿನಿಮಾ ಜನವರಿ 25 ರಂದು ಭಾರತೀಯ ಚಿತ್ರಮಂದಿರಗಳಲ್ಲಿ ಬಿಡುಗಡೆಯಾದ ಬಳಿಕ 1,000 ಕೋಟಿ ರೂಪಾಯಿಗೂ ಹೆಚ್ಚು ಹಣ ಗಳಿಸಿದೆ.

ಈ ಚಲನಚಿತ್ರವನ್ನು ಸಿದ್ಧಾರ್ಥ್ ಆನಂದ್ ನಿರ್ದೇಶಿಸಿದ್ದು ಜಾನ್ ಅಬ್ರಹಾಂ , ದೀಪಿಕಾ ಪಡುಕೋಣೆ ಪ್ರಮುಖ ಪಾತ್ರದಲ್ಲಿದ್ದಾರೆ.
“YRF ನ ಐತಿಹಾಸಿಕ ಬ್ಲಾಕ್‌ಬಸ್ಟರ್ ಪಠಾಣ್ ಮತ್ತೊಂದು ದಾಖಲೆಯನ್ನು ಸೃಷ್ಟಿಸಿದೆ. ರಷ್ಯಾ ಮತ್ತು ಸಿಐಎಸ್‌ನಾದ್ಯಂತ ಡಬ್ಬಿಂಗ್ ಆವೃತ್ತಿಯಲ್ಲಿ ಭಾರತೀಯ ಚಲನಚಿತ್ರವಾಗಿ ವ್ಯಾಪಕವಾಗಿ ಬಿಡುಗಡೆಯಾಗುತ್ತಿದೆ. ಜುಲೈ 13 ರಂದು ಈ ಪ್ರದೇಶದಲ್ಲಿ 3000+ ಪರದೆಗಳಲ್ಲಿ ಬಿಡುಗಡೆಯಾಗಲಿದೆ” ಎಂದು ಪತ್ರಿಕಾ ಪ್ರಕಟಣೆ ತಿಳಿಸಿದೆ.

ನಾಲ್ಕು ವರ್ಷಗಳಿಗಿಂತಲೂ ಹೆಚ್ಚು ಕಾಲ ಪ್ರಮುಖ ಪಾತ್ರಗಳಲ್ಲಿ ನಟಿಸದ ಶಾರುಖ್‌ ಖಾನ್ ಪಠಾಣ್ ಮೂಲಕ ಮೆಗಾ ಕಮ್ ಬ್ಯಾಕ್ ಮಾಡಿದ್ರು.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read