HomeKarnatakaಮಹಿಳೆಯರ ಉಚಿತ ಪ್ರಯಾಣಕ್ಕೆ ಶಕ್ತಿ ಸ್ಮಾರ್ಟ್ ಕಾರ್ಡ್: ಅದೇ ಮಾದರಿಯಲ್ಲಿ ಪುರುಷರಿಗೂ ಸ್ಮಾರ್ಟ್ ಕಾರ್ಡ್, ಸಾರ್ವಜನಿಕ...

ಮಹಿಳೆಯರ ಉಚಿತ ಪ್ರಯಾಣಕ್ಕೆ ಶಕ್ತಿ ಸ್ಮಾರ್ಟ್ ಕಾರ್ಡ್: ಅದೇ ಮಾದರಿಯಲ್ಲಿ ಪುರುಷರಿಗೂ ಸ್ಮಾರ್ಟ್ ಕಾರ್ಡ್, ಸಾರ್ವಜನಿಕ ವಾಹನಗಳಿಗೆ VLTS ಅಳವಡಿಕೆಗೆ ವೇಗ: ಬೈರತಿ ಸುರೇಶ್

ಬೆಂಗಳೂರು: ಮಹಿಳೆಯರು ಸೇರಿ ರಾಜ್ಯದ ಮೂರು ಕೋಟಿಗೂ ಅಧಿಕ ಸಾರಿಗೆ ಬಸ್ ಪ್ರಯಾಣಿಕರಿಗೆ ಸ್ಮಾರ್ಟ್ ಕಾರ್ಡ್ ವಿತರಿಸಲಾಗುವುದು ಎಂದು ಸಾರಿಗೆ ಸಚಿವ ಬೈರತಿ ಸುರೇಶ್ ತಿಳಿಸಿದ್ದಾರೆ.

ಕೆಎಸ್ಆರ್ಟಿಸಿ ಕೇಂದ್ರ ಕಚೇರಿಯಲ್ಲಿ ಸೋಮವಾರ 4 ನಿಗಮಗಳ ಹಿರಿಯ ಅಧಿಕಾರಿಗಳೊಂದಿಗೆ ಸಾರಿಗೆ ಸಚಿವರಾದ ಬಳಿಕ ಮೊದಲ ಸಭೆ ನಡೆಸಿದ ಬೈರತಿ ಸುರೇಶ್ ಶಕ್ತಿ ಯೋಜನೆಯನ್ನು ಮತ್ತಷ್ಟು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲಾಗುವುದು. ಇದಕ್ಕಾಗಿ ರಾಜ್ಯದ ಎಲ್ಲಾ ಮಹಿಳೆಯರಿಗೆ ಉಚಿತ ಪ್ರಯಾಣಕ್ಕಾಗಿ ಸ್ಮಾರ್ಟ್ ಕಾರ್ಡ್ ವಿತರಿಸಲಾಗುವುದು. ಶಕ್ತಿ ಸ್ಮಾರ್ಟ್ ಕಾರ್ಡ್ ಮಾದರಿಯಲ್ಲಿ ಪುರುಷರಿಗೂ ರೀಚಾರ್ಜ್ ಮಾಡಬಹುದಾದ ಸ್ಮಾರ್ಟ್ ಕಾರ್ಡ್ ನೀಡಲು ಉದ್ದೇಶಿಸಲಾಗಿದೆ ಎಂದು ಹೇಳಿದ್ದಾರೆ.

ಒಟ್ಟಾರೆ ಮೂರು ಕೋಟಿ ಜನರಿಗೆ ಸ್ಮಾರ್ಟ್ ಕಾರ್ಡ್ ಗಳನ್ನು ವಿತರಿಸಲು ನಿರ್ಧರಿಸಲಾಗಿದ್ದು, ಶಕ್ತಿ ಸ್ಮಾರ್ಟ್ ಕಾರ್ಡ್ ಉಚಿತ ಪ್ರಯಾಣಕ್ಕೆ ಬಳಸಬಹುದಾಗಿದೆ. ಪುರುಷರಿಗೆ ನೀಡುವ ಸ್ಮಾರ್ಟ್ ಕಾರ್ಡ್ ಗಳಿಗೆ ಹಣ ತುಂಬಿ ಅದರ ಮೂಲಕ ಟಿಕೆಟ್ ದರ ಪಾವತಿಸುವಂತೆ ವ್ಯವಸ್ಥೆ ಮಾಡಲಾಗುವುದು ಎಂದು ಹೇಳಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಮಹಿಳೆಯರ ಸುರಕ್ಷತೆಗಾಗಿ ಕಾರು, ಟ್ಯಾಕ್ಸಿ ಸೇರಿದಂತೆ ಇನ್ನಿತರ ಸಾರ್ವಜನಿಕ ಸೇವೆ ನೀಡುವ ವಾಹನಗಳಿಗೆ ವೆಹಿಕಲ್ ಲೊಕೇಶನ್ ಟ್ರ್ಯಾಕಿಂಗ್ ವ್ಯವಸ್ಥೆ(VLTS) ಅಳವಡಿಕೆಗೆ ವೇಗ ನೀಡಲು ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ತಿಳಿಸಿದ್ದಾರೆ.

ಉತ್ತಮ ಬಸ್ ಸೇವೆ ನೀಡುವ ಉದ್ದೇಶದಿಂದ ರಾಜ್ಯ ಸರ್ಕಾರದ ಅನುದಾನದಲ್ಲಿ 1000 ಹೊಸ ಬಸ್ ಗಳನ್ನು ಖರೀದಿಸಲಾಗುವುದು. 4000 ಎಲೆಕ್ಟ್ರಿಕ್ ಬಸ್ ಗಳನ್ನು ನಿಯೋಜಿಸಿ ಕೇಂದ್ರ ಸರ್ಕಾರದ ಅನುದಾನದಲ್ಲಿ ನಿಯೋಜಿಸಲಿದ್ದು, ಇವುಗಳನ್ನು ಹಂತ ಹಂತವಾಗಿ ನಾಲ್ಕು ನಿಗಮಗಳಿಗೆ ಹಂಚಿಕೆ ಮಾಡಲಾಗುವುದು ಎಂದು ಹೇಳಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

Most Popular