BIG NEWS : ‘ಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ಸ್’ ಸೇರಿದ ‘ಶಕ್ತಿ ಯೋಜನೆ ‘ : ‘CM ಸಿದ್ದರಾಮಯ್ಯ’ ಸಂತಸ.!

ಬೆಂಗಳೂರು : ರಾಜ್ಯ ಸರ್ಕಾರದ  ಶಕ್ತಿ ಯೋಜನೆ  “Golden Book of World Records” ನಲ್ಲಿ ದಾಖಲಾಗಿ ಇತಿಹಾಸ ನಿರ್ಮಿಸಿದ್ದು,  ಸಿಎಂ ಸಿದ್ದರಾಮಯ್ಯ ಸಂತಸ ವ್ಯಕ್ತಪಡಿಸಿದ್ದಾರೆ.

ಇಡೀ ನಾಡು ಹೆಮ್ಮೆ ಪಡುವ ಕ್ಷಣವಿದು. ನಮ್ಮ ಸರ್ಕಾರದ ಮಹತ್ವಾಕಾಂಕ್ಷೆಯ ಶಕ್ತಿ ಯೋಜನೆಯು ಪ್ರತಿಷ್ಠಿತ “Golden Book of World Records” ನಲ್ಲಿ ದಾಖಲಾಗಿ ಇತಿಹಾಸ ನಿರ್ಮಿಸಿದೆ.

ಮಹಿಳಾ ಸಬಲೀಕರಣದೆಡೆಗಿನ ದಿಟ್ಟ ಹೆಜ್ಜೆಯಾದ ಶಕ್ತಿ ಯೋಜನೆಯು ಚಾಲನೆಗೊಂಡ ದಿನದಿಂದ ಅಂದರೆ ಜೂನ್ 11, 2023 ರಿಂದ ಜುಲೈ 25, 2025 ರ ಅವಧಿಯಲ್ಲಿ 504 ಕೋಟಿ 90 ಲಕ್ಷಕ್ಕೂ ಹೆಚ್ಚು ಬಾರಿ ಮಹಿಳಾ ಪ್ರಯಾಣಿಕರು ಉಚಿತವಾಗಿ ಸ್ವಾವಲಂಬಿ ಬದುಕಿನೆಡೆಗೆ ಪ್ರಯಾಣಿಸುವ ಮೂಲಕ ಈ ಇತಿಹಾಸ ಸೃಷ್ಟಿಸಿದ್ದಾರೆ. ಈ ಸಾಧನೆಯ ಶ್ರೇಯ ಉದ್ಯೋಗ, ಶಿಕ್ಷಣ, ವೈದ್ಯಕೀಯ ಚಿಕಿತ್ಸೆ ಮುಂತಾದ ಉದ್ದೇಶಗಳಿಗಾಗಿ ನಿತ್ಯ ಸಂಚರಿಸುವ ನಾಡಿನ ನನ್ನ ತಾಯಂದಿರಿಗೆ, ಅಕ್ಕ – ತಂಗಿಯರಿಗೆ ಸಲ್ಲಬೇಕು. ಔದ್ಯೋಗಿಕ ವಲಯದಲ್ಲಿ ಮಹಿಳೆಯರ ಪಾಲ್ಗೊಳ್ಳುವಿಕೆ ಗಣನೀಯ ಪ್ರಮಾಣದಲ್ಲಿ ಏರಿಕೆಯಾಗಿದೆ, ಜೊತೆಗೆ ರಾಜ್ಯದ ತಲಾದಾಯವು ದೇಶದಲ್ಲೇ ನಂಬರ್ 01 ಸ್ಥಾನಕ್ಕೆ ತಲುಪಿದೆ. ಶಕ್ತಿ ಯೋಜನೆಯು ಸಾಮಾಜಿಕವಾಗಿ, ಶೈಕ್ಷಣಿಕವಾಗಿ, ಆರ್ಥಿಕವಾಗಿ, ಔದ್ಯೋಗಿಕವಾಗಿ ಮಹಿಳೆಯರನ್ನು ಸಬಲರನ್ನಾಗಿಸುತ್ತದೆ ಎಂಬ ನನ್ನ ನಂಬಿಕೆ ಈ ಮೂಲಕ ಹುಸಿಯಾಗಲಿಲ್ಲ. ಯೋಜನೆಯನ್ನು ಜಾರಿಗೆ ಕೊಟ್ಟ ನನಗಿದು ಅತ್ಯಂತ ಸಂತಸದ ಕ್ಷಣ. ಸಾರಿಗೆ ಸಚಿವರಾದ ರಾಮಲಿಂಗಾ ರೆಡ್ಡಿಯವರಿಗೂ, ಇಲಾಖೆಯ ಅಧಿಕಾರಿಗಳು ಮತ್ತು ಸಿಬ್ಬಂದಿ ವರ್ಗಕ್ಕೂ ಅಭಿನಂದನೆಗಳು ಎಂದು ಸಿಎಂ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read