HomeKarnatakaಶಕ್ತಿ ಯೋಜನೆಯಡಿ ಮಹಿಳೆಯರಿಗೆ ಉಚಿತ ಪ್ರಯಾಣ: ಸ್ಮಾರ್ಟ್ ಕಾರ್ಡ್ ಬದಲು ಸಾಮಾನ್ಯ ಬಸ್ ಪಾಸ್ ನೀಡಲು...

ಶಕ್ತಿ ಯೋಜನೆಯಡಿ ಮಹಿಳೆಯರಿಗೆ ಉಚಿತ ಪ್ರಯಾಣ: ಸ್ಮಾರ್ಟ್ ಕಾರ್ಡ್ ಬದಲು ಸಾಮಾನ್ಯ ಬಸ್ ಪಾಸ್ ನೀಡಲು ನಿರ್ಧಾರ

ಬೆಂಗಳೂರು: ಶಕ್ತಿ ಯೋಜನೆಯಡಿ ಮಹಿಳೆಯರಿಗೆ ಸರ್ಕಾರಿ ಬಸ್ ಗಳಲ್ಲಿ ಉಚಿತ ಪ್ರಯಾಣ ಕಲ್ಪಿಸಿದ್ದ ರಾಜ್ಯ ಸರ್ಕಾರ ಸ್ಮಾರ್ಟ್ ಕಾರ್ಡ್ ಬದಲಾಗಿ ಸಾಮಾನ್ಯ ಬಸ್ ಪಾಸ್ ನೀಡಲು ನಿರ್ಧರಿಸಿದೆ.

ಶಕ್ತಿ ಯೋಜನೆಗೆ ಅರ್ಜಿ ಸಲ್ಲಿಸಿದ ಮಹಿಳೆಯರಿಗೆ ಸ್ಮಾರ್ಟ್ ಕಾರ್ಡ್ ವಿತರಿಸುವುದಾಗಿ ಸರ್ಕಾರ ಹೇಳಿತ್ತು. ಆದರೆ ಮಹಿಳಾ ಪ್ರಯಣಿಕರಿಗೆ ಸ್ಮಾರ್ಟ್ ಕಾರ್ಡ್ ಬದಲಾಗಿ ಸಾಮಾನ್ಯ ಬಸ್ ಪಾಸ್ ನೀಡಲು ತೀರ್ಮಾನಿಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಶಕ್ತಿ ಯೋಜನೆ ಜಾರಿಗೆ ಬಂದಾಗಿನಿಂದ ಕೆ ಎಸ್ ಆರ್ ಟಿಸಿ ನಾಲ್ಕು ನಿಗಮಗಳಲ್ಲಿ ಮಹಿಳಾ ಪ್ರಯಾಣಿಕರ ಸಂಖ್ಯೆ ಹೆಚ್ಚಾಗಿದೆ. ಈ ಯೋಜನೆ ಉದ್ಘಾಟನೆಯ ಆರಂಭದಲ್ಲಿ ಸಾಂಕೇತಿಕವಾಗಿ ಕೆಲ ಮಹಿಳೆಯರಿಗೆ ರಾಜ್ಯ ಸರ್ಕಾರ ಸ್ಮಾರ್ಟ್ ಕಾರ್ಡ್ ವಿತರಿಸಿತ್ತು. ಮೂರು ತಿಂಗಳಲ್ಲಿ ಉಚಿತ ಪ್ರಯಾಣಕ್ಕೆ ಅರ್ಜಿ ಸಲ್ಲಿಸುವ ಎಲ್ಲಾ ಮಹಿಳೆಯರಿಗೂ ಸ್ಮಾರ್ಟ್ ಕಾರ್ಡ್ ವಿತರಿಸುವುದಾಗಿ ಹೇಳಿತ್ತು. ಆದರೆ ಈಗ ಸ್ಮಾರ್ಟ್ ಕಾರ್ಡ್ ಬದಲು ಸಾಮಾನ್ಯ ಬಸ್ ಪಾಸನ್ನೇ ನೀಡಲು ಮುಂದಾಗಿದೆ.

ಸಾರಿಗೆ ಇಲಾಖೆ ಸ್ಮಾರ್ಟ್ ಕಾರ್ಡ್ ಗಳನ್ನು ಅಭಿವೃದ್ಧಿಪಡಿಸಲು ಸೆಂಟರ್ ಫಾರ್ ಇ-ಆಡಳಿತ(CEG)ಕ್ಕೆ ಕೇಳಿದಾಗ ಬೇಡಿಕೆ ನಿರಾಕರಿಸಿದೆ. ಹೀಗಾಗಿ ಸಾಮಾನ್ಯ ಬಸ್ ಪಾಸ್ ನೀಡಲು ತೀರ್ಮಾನಿಸಲಾಗಿದೆ ಎಂದು ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.

ಇನ್ನು ಈ ಬಗ್ಗೆ ಮಾತನಾಡಿರುವ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ, ಸ್ಮಾರ್ಟ್ ಕಾರ್ಡ್ ಅಭಿವೃದ್ಧಿ ಪ್ರಸ್ತಾಪವನ್ನು ಸಿಇಜಿ ನಿರಾಕರಿಸಿದೆ. ಸುಮಾರು 3 ಕೋಟಿ ಸ್ಮಾರ್ಟ್ ಕಾರ್ಡ್ ತಯಾರಿ ಮಾಡಲು ನಾವು ಸಿಇಜಿ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಸೂಚಿಸಿದ್ದೆವು. ಆದರೆ ಇಷ್ಟೊಂದು ಪ್ರಮಾಣದಲ್ಲಿ ಸ್ಮಾರ್ಟ್ ಕಾರ್ಡ್ ತಯಾರಿಸಲು ಸಿಇಜಿ ಹಿಂದೇಟು ಹಾಕಿದೆ. ಹಾಗಾಗಿ ಸಾಮಾನ್ಯ ಬಸ್ ಪಾಸನ್ನೇ ಹೋಲುವ ಶಕ್ತಿ ಪಾಸ್ ಗಳನ್ನು ಪರಿಚಯಿಸಲು ನಿರ್ಧರಿಸಿದ್ದೇವೆ ಎಂದು ತಿಳಿಸಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular