`ಶಕ್ತಿ ಯೋಜನೆ’ಗೆ ಮತ್ತಷ್ಟು ಬಲ : ಪ್ರಯಾಣಿಕರ ಸುರಕ್ಷತೆಗೆ ಬಸ್ ಗಳಲ್ಲಿ `ಟ್ರಾಕಿಂಗ್ ಸಿಸ್ಟಮ್’, `ಪ್ಯಾನಿಕ್ ಬಟನ್’ ಅಳವಡಿಕೆ

ಬೆಂಗಳೂರು : ರಾಜ್ಯ ಸರ್ಕಾರದ ಮಹತ್ವಕಾಂಕ್ಷಿ ಯೋಜನೆಯಾದ ಸಾರಿಗೆ ಬಸ್ ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣದ ಶಕ್ತಿ ಯೋಜನೆಗೆ ರಾಜ್ಯ ಸರ್ಕಾರ ಮತ್ತಷ್ಟು ಶಕ್ತಿ ತುಂಬಲು ಮುಂದಾಗಿದೆ.

ರಾಜ್ಯಾದ್ಯಂತ ಶಕ್ತಿ ಯೋಜನೆ ಯಶಸ್ವಿಯಾಗಿದ್ದು, ಮಹಿಳೆಯರು ಉಚಿತವಾಗಿ ಬಸ್ ಗಳಲ್ಲಿ ಪ್ರಯಾಣಿಸುತ್ತಿದ್ದಾರೆ. ಪ್ರಯಾಣಿಕರ ಸುರಕ್ಷತೆಯ ದೃಷ್ಟಿಯಿಂದ ವೆಹಿಕಲ್ ಟ್ರಾಕಿಂಗ್ ಸಿಸ್ಟಮ್ ಹಾಗೂ ಬಸ್ಸುಗಳಲ್ಲಿ ಪ್ಯಾನಿಕ್ ಬಟನ್ ಅಳವಡಿಸಲು ರಾಜ್ಯ ಸರ್ಕಾರ ಮುಂದಾಗಿದೆ.

ಈ ಬಗ್ಗೆ ರಾಜ್ಯ ಕಾಂಗ್ರೆಸ್ ಘಟಕ ಟ್ವೀಟರ್ ನಲ್ಲಿ ಮಾಹಿತಿ ನೀಡಿದ್ದು, ಶಕ್ತಿ ಯೋಜನೆ ಯಶಸ್ವಿಯಾಗಿ ಮಹಿಳಾ ಸಬಲೀಕರಣಕ್ಕೆ ಮಹತ್ತರ ಕೊಡುಗೆ ನೀಡುತ್ತಿದೆ. ಪ್ರಯಾಣಿಕರ ಸುರಕ್ಷತೆಯ ದೃಷ್ಟಿಯಿಂದ ವೆಹಿಕಲ್ ಟ್ರಾಕಿಂಗ್ ಸಿಸ್ಟಮ್ ಹಾಗೂ ಬಸ್ಸುಗಳಲ್ಲಿ ಪ್ಯಾನಿಕ್ ಬಟನ್ ಅಳವಡಿಸಲು ಮುಂದಾಗಿದೆ ನಮ್ಮ ಸರ್ಕಾರ. ರಾಜ್ಯದ ಸಾರಿಗೆ ವ್ಯವಸ್ಥೆಯನ್ನು ಸದೃಢಗೊಳಿಸಿ ದೇಶಕ್ಕೆ ಮಾದರಿಯಾಗಿಸುವ ಪ್ರಯತ್ನ ನಮ್ಮ ಸರ್ಕಾರದ್ದು ಎಂದು ಹೇಳಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read