ಶಕ್ತಿ ಯೋಜನೆಗೆ ಭರ್ಜರಿ ಯಶಸ್ಸು: 99 ಕೋಟಿ ಮಹಿಳೆಯರ ಪ್ರಯಾಣ: ಬೃಹತ್ ಕಾರ್ಯಕ್ರಮ ನಡೆಸಲು ಚಿಂತನೆ

ಬೆಂಗಳೂರು: ಶಕ್ತಿ ಯೋಜನೆಯಡಿ 99 ಕೋಟಿಗೂ ಹೆಚ್ಚು ಮಹಿಳೆಯರು ಪ್ರಯಾಣಿಸಿದ್ದು, 100 ಕೋಟಿ ತಲುಪಿದ ಬಳಿಕ ಬೃಹತ್ ಕಾರ್ಯಕ್ರಮ ನಡೆಸಲು ಚಿಂತನೆ ನಡೆದಿದೆ.

ಸರ್ಕಾರಿ ಬಸ್ ಗಳಲ್ಲಿ ಇದುವರೆಗೆ 99 ಕೋಟಿಗೂ ಹೆಚ್ಚು ಮಹಿಳೆಯರು ಪ್ರಯಾಣ ಬೆಳೆಸಿದ್ದಾರೆ. ಸಿಎಂ ನೇತೃತ್ವದಲ್ಲಿ ನಡೆದ ಕೆಡಿಪಿ ಸಭೆಯಲ್ಲಿ ಈ ಬಗ್ಗೆ ಸಾರಿಗೆ ಇಲಾಖೆ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಶಕ್ತಿ ಯೋಜನೆ ಯಶಸ್ಸಿನ ಬಗ್ಗೆ ಮಾಹಿತಿ ನೀಡಲಾಗಿದೆ. 100 ಕೋಟಿ ಪ್ರಯಾಣಿಕರ ಸಂಖ್ಯೆ ದಾಟಿದ ನಂತರ ಬೃಹತ್ ಕಾರ್ಯಕ್ರಮ ಮಾಡಲು ಸರ್ಕಾರ ಚಿಂತನೆ ನಡೆಸಿದೆ. ಶಕ್ತಿ ಯೋಜನೆ ಯೋಜನೆ ಯಶಸ್ವಿಯಾಗಿ ಜಾರಿಯಾಗಿದೆ ಎಂದು ಪ್ರದರ್ಶಿಸಲು ಕಾರ್ಯಕ್ರಮ ನಡೆಸಲು ಪ್ಲಾನ್ ಮಾಡಿಕೊಳ್ಳಲಾಗಿದೆ ಬೃಹತ್ ಕಾರ್ಯಕ್ರಮ ಮಾಡುವ ಬಗ್ಗೆ ಕೆಡಿಪಿ ಸಭೆಯಲ್ಲಿ ಚರ್ಚೆ ನಡೆದಿದೆ.

ಶಕ್ತಿ ಯೋಜನೆ ಜಾರಿಯಾದಾಗಿನಿಂದ ನವೆಂಬರ್‌ 21ರ ವರೆಗೆ ಒಟ್ಟಾರೆ 99.75 ಕೋಟಿ ಮಹಿಳಾ ಪ್ರಯಾಣಿಕರು ಉಚಿತ ಸಾರಿಗೆ ಸೌಲಭ್ಯದ ಸದುಪಯೋಗ ಪಡೆದುಕೊಂಡಿರುತ್ತಾರೆ. ಇನ್ನೆರಡು ದಿನಗಳಲ್ಲಿ ನೂರು ಕೋಟಿ ದಾಟಲಿದೆ.

ತಿಂಗಳ ಸರಾಸರಿ ಪ್ರಯಾಣಿಕರ ಸಂಖ್ಯೆ ಏಪ್ರಿಲ್‌ 2023 ರಲ್ಲಿ 84.17 ಲಕ್ಷ ಇದ್ದು, ಶಕ್ತಿ ಯೋಜನೆ ಜಾರಿಯ ನಂತರ 1.08 ಕೋಟಿಯಿಂದ 1.15 ಕೋಟಿ ವರೆಗೆ ಹೆಚ್ಚಳ ವಾಗಿದೆ.

ರಾಜ್ಯದ ನಾಲ್ಕೂ ಸಾರಿಗೆ ನಿಗಮಗಳಿಗೆ ಒಟ್ಟು 828 ಸಾಮಾನ್ಯ ಹಾಗೂ 145 ವಿದ್ಯುತ್‌ ಚಾಲಿತ ಬಸ್‌ಗಳನ್ನು ಸೇರ್ಪಡೆಗೊಳಿಸಲಾಗುತ್ತಿದೆ. ಬಸ್‌ಗಳ ಖರೀದಿ ಪ್ರಕ್ರಿಯೆಯನ್ನು ನಿಗದಿತ ಅವಧಿಯಲ್ಲಿ ಪೂರ್ಣಗೊಳಿಸಲು ಕ್ರಮ ವಹಿಸಬೇಕು ಎಂದು ಸಿಎಂ ಸೂಚನೆ ನೀಡಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read