ಕಾಂಗ್ರೆಸ್ ಮೊದಲ ಗ್ಯಾರಂಟಿ ಸ್ಕೀಂಗೆ ನಾಳೆಯೇ ಚಾಲನೆ: ಮಹಿಳಾ ಸಬಲೀಕರಣದಲ್ಲಿ ಹೊಸ ಇತಿಹಾಸ: ಸಿಎಂ ಮಾಹಿತಿ

ಕಾಂಗ್ರೆಸ್ ಚುನಾವಣೆ ಪ್ರಣಾಳಿಕೆಯಲ್ಲಿ ನೀಡಿದ ಭರವಸೆಯ ಮೊದಲ ಗ್ಯಾರಂಟಿ ಸ್ಕೀಂ ನಾಳೆ ಆರಂಭವಾಗಲಿದೆ. ಶಕ್ತಿ ಯೋಜನೆಗೆ ಜೂ. 10 ರಂದು ಚಾಲನೆ ನೀಡಲಿದ್ದು, ಮಹಿಳೆಯರು ಆಯ್ದ ಸರ್ಕಾರಿ ಬಸ್ ಗಳಲ್ಲಿ ಉಚಿತವಾಗಿ ಪ್ರಯಾಣಿಸಬಹುದಾಗಿದೆ.

ಈ ಕುರಿತು ಮಾಹಿತಿ ಹಂಚಿಕೊಂಡಿರುವ ಸಿಎಂ ಸಿದ್ಧರಾಮಯ್ಯ ಅವರು, ಚುನಾವಣಾ ಪೂರ್ವದಲ್ಲಿ ನಾವು ಜನತೆಗೆ ನೀಡಿದ ವಚನದಂತೆ ನಮ್ಮ ಐದೂ ಗ್ಯಾರೆಂಟಿಗಳಿಗೆ ಅನುಮೋದನೆ ನೀಡಿ ನುಡಿದಂತೆ ನಡೆದಿದ್ದೇವೆ. ಮಹಿಳಾ ಸಬಲೀಕರಣದ ದಿಶೆಯಲ್ಲಿ ಹೊಸ ಇತಿಹಾಸ ಬರೆಯಲಿರುವ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ಸೌಲಭ್ಯ ಕಲ್ಪಿಸುವ “ಶಕ್ತಿ” ಯೋಜನೆಗೆ ನಾಳೆ ಬೆಳಿಗ್ಗೆ 11 ಗಂಟೆಗೆ ಚಾಲನೆ ನೀಡುತ್ತಿದ್ದೇವೆ ಎಂದು ತಿಳಿಸಿದ್ದಾರೆ.

ಉದ್ಯೋಗ, ಶಿಕ್ಷಣ, ಕುಟುಂಬ ನಿರ್ವಹಣೆ ಮುಂತಾದ ಜವಾಬ್ದಾರಿಯನ್ನು ನಿರ್ವಹಿಸುವ ಕಾರಣಕ್ಕಾಗಿ ನಿತ್ಯ ಸಂಚರಿಸುವ ನಾಡಿನ ಅಸಂಖ್ಯ ಮಹಿಳೆಯರ ಹೋರಾಟದ ಬದುಕಿಗೆ ನಮ್ಮ ಈ ಯೋಜನೆ ಬಲ ತುಂಬಲಿದೆ ಎಂಬ ವಿಶ್ವಾಸವಿದೆ ಎಂದು ಸಿಎಂ ಸಿದ್ಧರಾಮಯ್ಯ ಟ್ವೀಟ್ ಮಾಡಿದ್ದಾರೆ.

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read