5 ತಿಂಗಳಲ್ಲೇ ಖಾಲಿಯಾಯ್ತು ಶಕ್ತಿ ಯೋಜನೆಗೆ ಮೀಸಲಿಟ್ಟ ಶೇ. 71 ರಷ್ಟು ಅನುದಾನ

ಬೆಂಗಳೂರು: ಮಹಿಳೆಯರ ಉಚಿತ ಪ್ರಯಾಣಕ್ಕಾಗಿ ಆರಂಭಿಸಿದ ಶಕ್ತಿ ಯೋಜನೆಗೆ ಮೀಸಲಿಟ್ಟಿದ್ದ ಅನುದಾನದಲ್ಲಿ ಶೇಕಡ 71 ರಷ್ಟು ಅನುದಾನ ಐದು ತಿಂಗಳಲ್ಲೇ ಖಾಲಿಯಾಗಿದೆ.

2800 ಕೋಟಿ ರೂಪಾಯಿ ಅನುದಾನ ಮೀಸಲಿಟ್ಟಿದ್ದು, 5 ತಿಂಗಳಲ್ಲಿ 2000 ಕೋಟಿ ರೂ. ಖರ್ಚಾಗಿದೆ. ಶಕ್ತಿ ಯೋಜನೆಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಮಹಿಳೆಯರ ಉಚಿತ ಪ್ರಯಾಣದ ಟಿಕೆಟ್ ಮೌಲ್ಯ ಏರಿಕೆಯಾಗಿದೆ. ಕೆಎಸ್ಆರ್ಟಿಸಿ ಸಾಮಾನ್ಯ ಸಾರಿಗೆ ಬಸ್ ಗಳಲ್ಲಿ ಮಹಿಳೆಯರ ಉಚಿತ ಪ್ರಯಾಣದ ಶಕ್ತಿ ಯೋಜನೆಗೆ ಜೂನ್ 11ರಂದು ಚಾಲನೆ ನೀಡಲಾಗಿತ್ತು. 84.31 ಕೋಟಿ ಮಹಿಳಾ ಪ್ರಯಾಣಿಕರು ಯೋಜನೆಯ ಪ್ರಯೋಜನ ಪಡೆದಿದ್ದಾರೆ.

ಯೋಜನೆಗಾಗಿ ರಾಜ್ಯ ಸರ್ಕಾರ ಬಜೆಟ್ ನಲ್ಲಿ ಮೀಸಲಿಟ್ಟಿದ್ದ ಅನುದಾನದಲ್ಲಿ ಶೇಕಡ 71.42ರಷ್ಟು ಖರ್ಚಾಗಿದೆ. ಪ್ರಸಕ್ತ ಆರ್ಥಿಕ ವರ್ಷದಲ್ಲಿ 5 ತಿಂಗಳು ಬಾಕಿ ಉಳಿದಿದ್ದು, ಹೆಚ್ಚುವರಿ ಅನುದಾನಕ್ಕೆ ಸರ್ಕಾರದ ಮುಂದೆ ಬೇಡಿಕೆ ಸಲ್ಲಿಸಬೇಕಿದೆ. ಹೆಚ್ಚುವರಿಯಾಗಿ ಒಂದು ಸಾವಿರ ಕೋಟಿ ರೂ. ಅನುದಾನಕ್ಕೆ ಡಿಸೆಂಬರ್ ನಲ್ಲಿ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗುವುದು ಎಂದು ಹೇಳಲಾಗಿದೆ.

ಜೂನ್ ನಿಂದ ಸೆಪ್ಟಂಬರ್ ವರೆಗೆ 4 ಸಾರಿಗೆ ನಿಗಮಗಳಿಂದ 1603.30 ಕೋಟಿ ರೂ. ಮೌಲ್ಯದ ಉಚಿತ ಟಿಕೆಟ್ ವಿತರಿಸಲಾಗಿದೆ. ಇದರಲ್ಲಿ ಆರ್ಥಿಕ ಇಲಾಖೆ ಶೇಕಡ 68 ರಷ್ಟು ಹಣ ಬಿಡುಗಡೆ ಮಾಡಿದ್ದು, ಉಳಿದ ಹಣ ಬಿಡುಗಡೆಗೆ ಕ್ರಮ ಕೈಗೊಳ್ಳಲಾಗಿದೆ.

ಪ್ರಸಕ್ತ ಸಾಲಿನಲ್ಲಿ ಶಕ್ತಿ ಯೋಜನೆಗೆ 2800 ಕೋಟಿ ರೂ. ಅನುದಾನ ಮೀಸಲಿಟ್ಟಿದ್ದು, ಅಕ್ಟೋಬರ್ ಅಂತ್ಯದ ವೇಳೆಗೆ ಶಕ್ತಿ ಯೋಜನೆಯಡಿ 2 ಸಾವಿರ ಕೋಟಿ ರೂ. ಮೊತ್ತದ ಉಚಿತ ಟಿಕೆಟ್ ಆಗಲಿದೆ. ಹಣಕಾಸು ಇಲಾಖೆ ಆ ಮೊತ್ತವನ್ನು 4 ಸಾರಿಗೆ ನಿಗಮಗಳಿಗೆ ನೀಡಬೇಕಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read