HomeKarnatakaಖಾಸಗಿ ಬಸ್ ಗಳಲ್ಲೂ ಉಚಿತ ಪ್ರಯಾಣಕ್ಕೆ ಶಕ್ತಿ ಯೋಜನೆ ವಿಸ್ತರಣೆ: 2 ತಿಂಗಳಲ್ಲಿ ನಿರ್ಧರಿಸಲು ಸರ್ಕಾರಕ್ಕೆ...

ಖಾಸಗಿ ಬಸ್ ಗಳಲ್ಲೂ ಉಚಿತ ಪ್ರಯಾಣಕ್ಕೆ ಶಕ್ತಿ ಯೋಜನೆ ವಿಸ್ತರಣೆ: 2 ತಿಂಗಳಲ್ಲಿ ನಿರ್ಧರಿಸಲು ಸರ್ಕಾರಕ್ಕೆ ಹೈಕೋರ್ಟ್ ಸೂಚನೆ

ಬೆಂಗಳೂರು: ಸರ್ಕಾರಿ ಬಸ್ ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣಕ್ಕಾಗಿ ಶಕ್ತಿ ಯೋಜನೆ ಜಾರಿಗೊಳಿಸಲಾಗಿದೆ. ಖಾಸಗಿ ಬಸ್ ಗಳಿಗೂ ಶಕ್ತಿ ಯೋಜನೆ ವಿಸ್ತರಿಸುವಂತೆ ಸರ್ಕಾರಕ್ಕೆ ನಿರ್ದೇಶನ ನೀಡಲು ಕೋರಿ ಸಲ್ಲಿಸಲಾಗಿದ್ದ ಅರ್ಜಿಯನ್ನು ಹೈಕೋರ್ಟ್ ಇತ್ಯರ್ಥಪಡಿಸಿದೆ.

ಅರ್ಜಿದಾರರ ಮನವಿಯನ್ನು ಕಾನೂನು ಪ್ರಕಾರ ಎರಡು ತಿಂಗಳಲ್ಲಿ ಪರಿಗಣಿಸುವಂತೆ ಸರ್ಕಾರಕ್ಕೆ ಹೈಕೋರ್ಟ್ ಸೂಚನೆ ನೀಡಿದೆ. ಉಡುಪಿ ಜಿಲ್ಲೆಯ ಕಾರ್ಕಳದ ಖಾಸಗಿ ಬಸ್ ಆಪರೇಟರ್ ಶರತ್ ಶೆಟ್ಟಿ ಸಲ್ಲಿಸಿದ್ದ ತಕರಾರು ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ನ್ಯಾಯಮೂರ್ತಿ ಎಸ್.ಆರ್. ಕೃಷ್ಣಕುಮಾರ್ ಅವರ ಪೀಠ ಸರ್ಕಾರಕ್ಕೆ ನಿರ್ದೇಶನ ನೀಡಿದೆ.

ಅರ್ಜಿದಾರರ ಪರ ಹಿರಿಯ ವಕೀಲ ಪುತ್ತಿಗೆ ರಮೇಶ್ ವಾದ ಮಂಡಿಸಿ, ಶಕ್ತಿ ಯೋಜನೆ ಜಾರಿಯಾಗಿ ಖಾಸಗಿ ಬಸ್ ಮಾಲೀಕರು ಸಂಕಷ್ಟದಲ್ಲಿದ್ದಾರೆ. ಈ ಯೋಜನೆಯನ್ನು ಖಾಸಗಿ ಬಸ್ ಗಳಿಗೂ ವಿಸ್ತರಿಸಬೇಕು ಎಂದು ಮನವಿ ಮಾಡಿದ್ದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular