HomeKarnatakaBREAKING: ಮಹಿಳೆಯರಿಗೆ ಉಚಿತ ಪ್ರಯಾಣದ ಶಕ್ತಿ ಯೋಜನೆಗೆ ಚಾಲನೆ: ಸಾಂಕೇತಿಕವಾಗಿ ಐವರು ಮಹಿಳೆಯರಿಗೆ ಸ್ಮಾರ್ಟ್ ಕಾರ್ಡ್...

BREAKING: ಮಹಿಳೆಯರಿಗೆ ಉಚಿತ ಪ್ರಯಾಣದ ಶಕ್ತಿ ಯೋಜನೆಗೆ ಚಾಲನೆ: ಸಾಂಕೇತಿಕವಾಗಿ ಐವರು ಮಹಿಳೆಯರಿಗೆ ಸ್ಮಾರ್ಟ್ ಕಾರ್ಡ್ ವಿತರಣೆ

ಬೆಂಗಳೂರು: ಸರ್ಕಾರಿ ಬಸ್ ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ ಸೌಲಭ್ಯ ಕಲ್ಪಿಸುವ ಶಕ್ತಿ ಯೋಜನೆಗೆ ಇಂದು ಚಾಲನೆ ನೀಡಲಾಗಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸೇರಿದಂತೆ ಹಲವು ಗಣ್ಯರು ವಿಧಾನಸೌಧ ಎದುರು ನಡೆದ ಕಾರ್ಯಕ್ರಮದಲ್ಲಿ ಶಕ್ತಿ ಯೋಜನೆಗೆ ಚಾಲನೆ ನೀಡಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಇದೇ ಸಂದರ್ಭದಲ್ಲಿ ಸ್ಮಾರ್ಟ್ ಕಾರ್ಡ್ ಮಾದರಿಯನ್ನು ಕೂಡ ಬಿಡುಗಡೆ ಮಾಡಲಾಗಿದೆ. ಉದ್ಘಾಟನೆ ಕಾರ್ಯಕ್ರಮದಲ್ಲಿ ಸಾಂಕೇತಿಕವಾಗಿ ಐವರು ಮಹಿಳೆಯರಿಗೆ ಸ್ಮಾರ್ಟ್ ಕಾರ್ಡ್ ವಿತರಿಸಲಾಗಿದೆ. ಸುಮಿತ್ರಾ, ರಾಧಾ, ಪ್ರೇಮಾ, ಕಲಾವತಿ, ಪವಿತ್ರಾ ಅವರಿಗೆ ಶಕ್ತಿ ಯೋಜನೆಯ ಸ್ಮಾರ್ಟ್ ಕಾರ್ಡ್ ನೀಡಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular