HomeKarnatakaBIG NEWS: ಶಕ್ತಿ ಯೋಜನೆ ದುರುಪಯೋಗ: ಬಿಎಂಟಿಸಿ ನಾಲ್ವರು ನಿರ್ವಾಹಕರು ಸಸ್ಪೆಂಡ್

BIG NEWS: ಶಕ್ತಿ ಯೋಜನೆ ದುರುಪಯೋಗ: ಬಿಎಂಟಿಸಿ ನಾಲ್ವರು ನಿರ್ವಾಹಕರು ಸಸ್ಪೆಂಡ್

ಬೆಂಗಳೂರು: ಬಿಎಂಟಿಸಿಯ ಕೆಲ ನಿರ್ವಾಹಕರು ಶಕ್ತಿ ಯೋಜನೆಯನ್ನು ದುರುಪಯೋಗಪಡಿಸಿಕೊಂಡು ಪುರುಷ ಪ್ರಯಾಣಿಕರಿಗೆ ಮಹಿಳೆಯರ ಉಚಿತ ಟಿಕೆಟ್ ನೀಡಿದ್ದಾರೆ. ತಮ್ಮ ವೈಯಕ್ತಿಕ ಯುಪಿಐ ಕ್ಯೂಆರ್ ಕೋಡ್‌ಗಳನ್ನು ಬಳಸಿ ನಿಗಮಕ್ಕೆ ಬರಬೇಕಿದ್ದ ಹಣವನ್ನು ಲೂಟಿ ಮಾಅಡಿರುವ ಆರೋಪ ಕೇಳಿಬಂದಿದ್ದು, ಈ ಹಗರಣದಲ್ಲಿ ಭಾಗಿಯಾದ ನಾಲ್ವರು ನಿರ್ವಾಹಕರನ್ನು ಅಮಾನತುಗೊಳಿಸಿ ಆದೇಶ ಹೊರಡಿಸಲಾಗಿದೆ.

ರಾಜ್ಯ ಕಾಂಗ್ರೆಸ್ ಸರ್ಕಾರ ಮಹಿಳೆಯರಿಗಾಗಿ ಮಹತ್ವಾಕಾಂಕ್ಷೆಯ ಶಕ್ತಿ ಯೋಜನೆ ಜಾರಿಗೆ ತಂದಿದ್ದರೆ ಬಿಎಂಟಿಸಿಯ ಕೆಲ ನಿರ್ವಾಹಕರು ಆಯೋಜನೆಯನ್ನು ದುರುಪಯೋಗಪಡಿಸಿಕೊಂಡು ಲಕ್ಷ ಲಕ್ಷ ಹಣ ತಮ್ಮ ಖಾತೆಗೆ ಹಾಕಿಸಿಕೊಂಡಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಕನ್ನಡ ಬಾರದ ಪುರುಷ ಪ್ರಯಾಣಿಕರಿಗೆ ಶಕ್ತಿ ಯೋಜನೆಯ ಟಿಕೆಟ್​​ ನೀಡಿ ದುಡ್ಡು ಮಾಡ್ತಿದ್ದಾರೆ. ಮತ್ತೊಂದೆಡೆ ಪ್ರಯಾಣಿಕರಿಗೆ ಸಹಾಯ ಆಗಲಿ ಎಂದು ಬಿಎಂಟಿಸಿ ಯುಪಿಐ ಕ್ಯೂಆರ್​ ಕೋಡ್​​ಗಳನ್ನು ಅಳವಡಿಸಿದೆ. ಇದನ್ನು ಸ್ಕ್ಯಾನ್​​ ಮಾಡಿ ಟಿಕೆಟ್​​ ಹಣ ಪಾವತಿಸುವಂತೆ ಪ್ರಯಾಣಿಕರಿಗೆ ಸೂಚಿವ ಬದಲು, ಕೆಲ ನಿರ್ವಾಹಕರು ತಮ್ಮ ವೈಯಕ್ತಿಕ ಯುಪಿಐ ಮಾಹಿತಿ ನೀಡಿ ದುಡ್ಡು ಪೀಕುವ ಕೆಲಸ ಮಾಡಿದ್ದಾರೆ. ನಿಗಮಕ್ಕೆ ಸೇರಬೇಕಿದ್ದ ಲಕ್ಷ ಲಕ್ಷ ಹಣ ತಮ್ಮ ಜೇಬಿಗೆ ಇಳಿಸಿಕೊಂಡಿದ್ದ ನಾಲ್ಕು ಕಂಡಕ್ಟರ್​​ಗಳನ್ನು ಸಸ್ಪೆಂಡ್ ಮಾಡಲಾಗಿದೆ.

ಶಕ್ತಿ ಯೋಜನೆಯ ಫ್ರೀ ಟಿಕೆಟ್ ಮೇಲೆ ಕನ್ನಡದಲ್ಲಿ ಮಾತ್ರ ಉಚಿತ ಪ್ರಯಾಣ ಎಂದು ಪ್ರಿಂಟ್ ಮಾಡಲಾಗಿದೆ. ಹೀಗಾಗಿ ಕನ್ನಡ ಓದಲು ಬಾರದ ಪ್ರಯಾಣಿಕರನ್ನೇ ಟಾರ್ಗೆಟ್​ ಮಾಡಿ ಅವರಿಗೆ ಟಿಕೆಟ್​​ ನೀಡಿ ಹಣ ಪಡೆಯಲಾಗುತ್ತಿತ್ತು. ತನಿಖೆಯಲ್ಲಿ ಕೆಲ ನಿರ್ವಾಹಕರ ಕಳ್ಳಾಟ ಬಯಲಾಗಿದ್ದು, ಅಕೌಂಟ್​​ನಲ್ಲಿ ಸಾವಿರಾರು ರೂಪಾಯಿ ಹಣವೂ ಪತ್ತೆಯಾಗಿದೆ.

ಸೂರ್ಯನಾರಾಯಣ- ಡಿಪೋ- 18, ಡ್ರೈವರ್ ಕಂ ಕಂಡಕ್ಟರ್ : 54,290 ರೂ.
ಬೊಮ್ಮಲಿಂಗೇಶ್ ಸಿ.- ಡಿಪೋ- 18, ಡ್ರೈವರ್ ಕಂ ಕಂಡಕ್ಟರ್: 16,404 ರೂ.
ಬ್ರಿಜೇಶ್ ಬಾಬು- ಡಿಪೋ- 51, ಡ್ರೈವರ್ ಕಂ ಕಂಡಕ್ಟರ್: 9,795 ರೂ.
ಮೋಹನ್- ಡಿಪೋ- 18, ಡ್ರೈವರ್ ಕಂ ಕಂಡಕ್ಟರ್: 6,117 ರೂ.
ಇನ್ನು ಈ ಕಂಡಕ್ಟರ್ಗ​​ಳು ಡಿಪೋದಿಂದ ಬಸ್​​ಗಳು ಹೊರಗೆ ಬರ್ತಿದ್ದಂತೆ ಬಿಎಂಟಿಸಿಯ ಯುಪಿಐ ಕ್ಯೂಆರ್​​ ಕೋಡ್​​ಗಳನ್ನು ಕಿತ್ತು ಇಟ್ಟುಕೊಳ್ಳುತ್ತಿದ್ದರು. ಪ್ರಯಾಣಿಕರು ಯುಪಿಐ ಪೇಮೆಂಟ್ ಮಾಡಿ ಟಿಕೆಟ್ ಖರೀದಿ ಮಾಡಬೇಕು ಎಂದು ಕೇಳಿದಾಗ, ತಮ್ಮ ಮೊಬೈಲ್​​ನಲ್ಲಿರುವ ಸ್ವಂತ ಅಕೌಂಟ್​​ನ ಕ್ಯೂಆರ್​​ ಕೋಡ್​​ ನೀಡಿ ಹಣ ಹಾಕಿಸಿಕೊಳ್ಳುತ್ತಿದ್ದರು. ಈ ಬಗ್ಗೆ ಆರೋಪ ಕೇಳಿ ಬಂದ ಹಿನ್ನೆಲೆ ಬಿಎಂಟಿಸಿಯ ಸೆಕ್ಯೂರಿಟಿ ಅಧಿಕಾರಿಗಳು ತಪಾಸಣೆ ಮಾಡಿದಾಗ ಹತ್ತಕ್ಕೂ ಹೆಚ್ಚು ಕಂಡಕ್ಟರ್​​ಗಳುಸಿಕ್ಕಿಬಿದ್ದಿದ್ದಾರೆ.

ಪ್ರತಿಯೊಬ್ಬರ ಅಕೌಂಟ್ ನಲ್ಲಿ 10ರಿಂದ 50 ಸಾವಿರ ರೂಪಾಯಿವರೆಗೆ ಯುಪಿಐ ವಹಿವಾಟು ನಡೆದಿರೋದು ಬಯಲಾಗಿದೆ. ಆ ಸಂಬಂಧ ಸದ್ಯ ನಾಲ್ಕು ಜನರನ್ನು ಸಸ್ಪೆಂಡ್ ಮಾಡಲಾಗಿದ್ದು, ಮುಂದಿನ ದಿನಗಳಲ್ಲಿ ಇನ್ನಷ್ಟು ಜನರ ಅಕ್ರಮ ಬಯಲಾಗಲಿದೆ.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular