HomeKarnatakaರಾಜ್ಯ ವ್ಯಾಪಿ ಸರ್ಕಾರಿ ಶಾಲೆಗಳಲ್ಲಿ ಮಕ್ಕಳ ದಾಖಲಾತಿ ಹೆಚ್ಚಳಕ್ಕೆ ಶಾಲಾ ಚಲೋ ಆಂದೋಲನ

ರಾಜ್ಯ ವ್ಯಾಪಿ ಸರ್ಕಾರಿ ಶಾಲೆಗಳಲ್ಲಿ ಮಕ್ಕಳ ದಾಖಲಾತಿ ಹೆಚ್ಚಳಕ್ಕೆ ಶಾಲಾ ಚಲೋ ಆಂದೋಲನ

ಬೆಂಗಳೂರು: ರಾಜ್ಯದ ಸರ್ಕಾರಿ ಶಾಲೆಗಳಲ್ಲಿ ಮಕ್ಕಳ ದಾಖಲಾತಿ ಹೆಚ್ಚಿಸಲು ರಾಜ್ಯಾದ್ಯಂತ ಶಾಲಾ ಚಲೋ ಎಂಬ ದಾಖಲಾತಿ ಆಂದೋಲನ ಆರಂಭಿಸಲು ಶಿಕ್ಷಣ ಇಲಾಖೆ ಮುಂದಾಗಿದೆ.

ಕಳೆದ ಕೆಲವು ವರ್ಷಗಳಿಂದ ರಾಜ್ಯದ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳ ದಾಖಲಾತಿಯಲ್ಲಿ ಕುಸಿತ ಕಂಡು ಬಂದ ಹಿನ್ನೆಲೆಯಲ್ಲಿ ಗುಣಮಟ್ಟದ ಶಿಕ್ಷಣ ಬಲಪಡಿಸುವ ಮತ್ತು ಸಾರ್ವಜನಿಕ ವಿಶ್ವಾಸ ಗಳಿಸುವ ಉದ್ದೇಶದಿಂದ ಈ ಆಂದೋಲನ ಕೈಗೊಳ್ಳಲಾಗಿದೆ.

ಕಡಿಮೆ ದಾಖಲಾತಿ ಹೊಂದಿದ ಶಾಲೆಗಳ ಪಟ್ಟಿ ಸಿದ್ದಪಡಿಸಿ, ಶಾಲೆಯಿಂದ ಹೊರಗುಳಿದ ಮಕ್ಕಳನ್ನು ಗುರುತಿಸಿ ಟ್ರ್ಯಾಕಿಂಗ್ ವ್ಯವಸ್ಥೆ ಜಾರಿಗೊಳಿಸಲಾಗದು. ಶಾಲಾ ಚಲೋ ಜೊತೆಗೆ, ಪ್ರವೇಶೋತ್ಸವ ಹಮ್ಮಿಕೊಳ್ಳಲಾಗುವುದು. ಶಿಕ್ಷಕರ ಸಾಮರ್ಥ್ಯ ವೃದ್ಧಿ ಮತ್ತು ಹೊಣೆಗಾರಿಕೆ ವ್ಯವಸ್ಥೆ ಬಲಪಡಿಸುವುದು, ಮೂಲಸೌಕರ್ಯ ಸುಧಾರಣೆಗೆ ಒತ್ತು, ಮಕ್ಕಳ ಸ್ನೇಹಿ ವಾತಾವರಣ ನಿರ್ಮಿಸಲಾಗುವುದು. ವಿದ್ಯಾರ್ಥಿಗಳನ್ನು ಆಕರ್ಷಿಸಲು ಕ್ರೀಡೆ, ಸಾಂಸ್ಕೃತಿಕ, ವಿಜ್ಞಾನ ಚಟುವಟಿಕೆಗಳ ವಿಸ್ತರಣೆ, ಜನ್ಮದಿನ ಆಚರಣೆ, ಸಮವಸ್ತ್ರ ವಿತರಣೆ ಸೇರಿ ಅನೇಕ ಕಾರ್ಯಕ್ರಮ ಹಮ್ಮಿಕೊಳ್ಳಲಾಗುವುದು ಎನ್ನಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

Most Popular