HomeLatest NewsBREAKING: ಸಿಎಸ್ ಶಾಲಿನಿ ರಜನೀಶ್ ವಿರುದ್ಧ ಗಂಭೀರ ಆರೋಪ: 1.60 ಕೋಟಿ ಲಂಚ ಪಡೆದು ಮುಡಾ...

BREAKING: ಸಿಎಸ್ ಶಾಲಿನಿ ರಜನೀಶ್ ವಿರುದ್ಧ ಗಂಭೀರ ಆರೋಪ: 1.60 ಕೋಟಿ ಲಂಚ ಪಡೆದು ಮುಡಾ ಮಾಜಿ ಆಯುಕ್ತ ನಟೇಶ್ ಗೆ ಬಡ್ತಿ: ದಾಖಲೆ ಬಿಡುಗಡೆ ಮಾಡಿದ ಸ್ನೇಹಮಯಿ ಕೃಷ್ಣ

ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ-ಮುಡಾ ಹಗರಣದ ದೂರುದಾರ ಸ್ನೇಹಮಯಿ ಕೃಷ್ಣ ಮತ್ತೊಂದು ಗಂಭೀರ ಆರೋಪ ಮಾಡಿದ್ದಲ್ಲದೇ ದಾಖಲೆಗಳನ್ನು ಬಿಡುಗಡೆ ಮಾಡಿದ್ದಾರೆ.

ಸರ್ಕಾರದ ಮುಖ್ಯಕಾರ್ಯದರ್ಶಿ ಡಾ.ಶಾಲಿನಿ ರಜನೀಶ್ ಅವರ ವಿರುದ್ಧ ಗಂಭೀರ ಆರೋಪ ಮಾಡಿರುವ ಸ್ನೇಹಮಯಿಕೃಷ್ಣ, ಸಿಎಸ್ ಶಾಲಿನಿ ರಜನೀಶ್ ಕೋಟ್ಯಂತರ ರೂಪಾಯಿ ಲಂಚ ಪಡೆದಿದ್ದಾರೆ ಎಂದು ಆರೋಪಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಮುಡಾ ಮಾಜಿ ಆಯುಕ್ತ ನಟೇಶ್ ಅವರಿಂದ ಶಾಲಿನಿ ರಜನೀಶ್ ಲಂಚ ಪಡೆದು ಅವರಿಗೆ ಮುಂಬಡ್ತಿ ನೀಡಿದ್ದಾರೆ ಎಂದು ಹೇಳಿದ್ದಾರೆ. ಮೂಡಾ ಮಾಜಿ ಆಯುಕ್ತ ನಟೇಶ್ ಅವರಿಂದ 1.60ಕೋಟಿ ರೂಪಾಯಿ ಲಂಚವನ್ನು ಸಿಎಸ್ ಶಾಲಿನಿ ರಜನೀಶ್ ಪಡೆದುಕೊಂಡಿದ್ದಾರೆ. ಲಂಚದ ಹಣವನ್ನು ಕಾರಿನಲ್ಲಿ ತರಿಸಿಕೊಳ್ಳಲಾಗಿದೆ ಎಂದು ದಾಖಲೆ ಬಿಡಿಗಡೆ ಮಾಡಿದ್ದಾರೆ.

ಅಲ್ಲದೇ ಸರ್ಕಾರದ ಮುಖ್ಯಕಾರ್ಯದರ್ಶಿ ಶಾಲಿನಿ ರಜನೀಶ್ ಮುಡಾ ಮಾಜಿ ಆಯುಕ್ತರಿಂದ ಲಂಚ ಪಡೆದಿರುವ ಬಗ್ಗೆ ಜಾರಿ ನಿರ್ದೇಶನಾಲಯಕ್ಕೂ ಸ್ನೇಹಮಯಿ ಕೃಷ್ಣ ಪತ್ರ ಬರೆದಿದ್ದು, ಸೂಕ್ತ ತನಿಖೆ ನಡೆಸುವಂತೆ ಒತ್ತಾಯಿಸಿದ್ದಾರೆ.

ಸ್ನೇಹಮಯಿ ಕೃಷ್ಣ ಅವರ ಆರೋಪಗಳಿಗೆ ಪ್ರತಿಕ್ರಿಯಿಸಿರುವ ಸರ್ಕಾರದ ಮುಖ್ಯಕಾರ್ಯದರ್ಶಿ ಶಾಲಿನಿ ರಜನೀಶ್, ಇದೆಲ್ಲವೂ ಆಧಾರರಹಿತ ಆರೋಪಗಳಾಗಿವೆ. ಆಧಾರರಹಿತ ಆರೋಪಕ್ಕೆ ಕ್ರಮ ಜರುಗಿಸಲಾಗುವುದು. ದೂರುದಾರರು ಆರೋಪಕ್ಕೆ ಪೂರಕವಾದ ದಾಖಲೆಗಳನ್ನು ಸಲ್ಲಿಸಿಲ್ಲ. ಆಧಾರ ರಹಿತ ಆರೋಪದ ಬಗ್ಗೆ ಕ್ರಮ ಕೈಗೊಳ್ಳಲಾಗುವುದು ಎಂದು ಸ್ಪಷ್ಟೀಕರಣದ ಮೂಲಕ ಖಡಕ್ ಎಚ್ಚರಿಕೆ ನೀಡಿದ್ದಾರೆ.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular