HomeKarnatakaಸಂಸದ ಸಿದ್ದೇಶ್ವರ ಪತ್ನಿ ಗಾಯತ್ರಿ ಅಡುಗೆ ಮಾಡುವುದಕ್ಕೆ ಲಾಯಕ್ಕು ಹೇಳಿಕೆ ಬಗ್ಗೆ ಚುನಾವಣಾ ಆಯೋಗಕ್ಕೆ ಶಾಮನೂರು...

ಸಂಸದ ಸಿದ್ದೇಶ್ವರ ಪತ್ನಿ ಗಾಯತ್ರಿ ಅಡುಗೆ ಮಾಡುವುದಕ್ಕೆ ಲಾಯಕ್ಕು ಹೇಳಿಕೆ ಬಗ್ಗೆ ಚುನಾವಣಾ ಆಯೋಗಕ್ಕೆ ಶಾಮನೂರು ಸ್ಪಷ್ಟನೆ

ದಾವಣಗೆರೆ: ಸಂಸದ ಸಿದ್ದೇಶ್ವರ ಪತ್ನಿ, ದಾವಣಗೆರೆ ಲೋಕಸಭೆ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ಧೇಶ್ವರ ಅವರು ಅಡುಗೆ ಮಾಡುವುದಕ್ಕೆ ಲಾಯಕ್ಕು ಎಂದು ಹೇಳಿದ್ದ ಶಾಸಕ ಶಾಮನೂರು ಶಿವಶಂಕರಪ್ಪ ತಮ್ಮ ಹೇಳಿಕೆ ಬಗ್ಗೆ ಚುನಾವಣಾ ಆಯೋಗಕ್ಕೆ ಪತ್ರ ಬರೆದು ಸ್ಪಷ್ಟನೆ ನೀಡಿದ್ದಾರೆ.

ನಮಗೆ ಆಗದವರು ದ್ವೇಷದಿಂದ ಈ ರೀತಿ ಮಾಡಿದ್ದಾರೆ. ಬಿಜೆಪಿ ಅಭ್ಯರ್ಥಿ ಬಗ್ಗೆ ನಾನು ಹೇಳಿಕೆ ಕೊಟ್ಟಿದ್ದೇನೆ ಎಂದು ಸೃಷ್ಟಿ ಮಾಡಿ ಮಾಧ್ಯಮಗಳಲ್ಲಿ ಹರಿಬಿಟ್ಟಿದ್ದಾರೆ ಎಂದು ದೂರಿದ್ದಾರೆ.

ಮಹಿಳೆಯರು ಎಲ್ಲಾ ಕ್ಷೇತ್ರಗಳಲ್ಲೂ ಛಾಪು ಮೂಡಿಸಿದ್ದಾರೆ. ಮಹಿಳೆಯರು ಅಡುಗೆ ಮನೆಗೆ ಸೀಮಿತವಲ್ಲ ಎಂಬುದನ್ನು ಸಾಬೀತುಪಡಿಸಿದ್ದಾರೆ. ನಮ್ಮ ಪಕ್ಷದ ದಿ. ಇಂದಿರಾ ಗಾಂಧಿ ಗಾಂಧಿ ಅವರು ಕೂಡ ಸಾಬೀತುಪಡಿಸಿದ್ದಾರೆ. ಅದೇ ರೀತಿ ದಾವಣಗೆರೆ ಕ್ಷೇತ್ರದಲ್ಲೂ ಮಹಿಳಾ ಅಭ್ಯರ್ಥಿ ಸ್ಪರ್ಧಿಸಿದ್ದು, ನಿಮ್ಮ ಸಮಸ್ಯೆ ದೆಹಲಿಗೆ ತಲುಪಿಸುವವರೆಗೆ ಮತ ನೀಡಿ ಎಂದಿದ್ದೇನೆ. ನನ್ನ ಹೇಳಿಕೆಯನ್ನು ತಿರುಚಲಾಗಿದೆ ಎಂದು ಶಾಮನೂರು ಆರೋಪಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಶಾಮನೂರು ಅವರ ಹೇಳಿಕೆ ಬಗ್ಗೆ ಬ್ಯಾಡ್ಮಿಂಟನ್ ಆಟಗಾರ್ತಿ ಸೈನಾ ನೆಹ್ವಾಲ್ ಆಕ್ಷೇಪಿಸಿದ್ದರು. ಡಿಸಿಎಂ ಡಿ.ಕೆ. ಶಿವಕುಮಾರ್ ಸೇರಿ ಅನೇಕರು ಖಂಡಿಸಿದ್ದರು. ಲಿಖಿತ ಹೇಳಿಕೆಯೊಂದಿಗೆ ಸ್ಪಷ್ಟನೆ ನೀಡುವಂತೆ ಸಹಾಯಕ ಚುನಾವಣಾಧಿಕಾರಿ ಶಾಮನೂರು ಶಿವಶಂಕರಪ್ಪ ಅವರಿಗೆ ಸೂಚಿಸಿದ್ದರು. ಹೀಗಾಗಿ ಪತ್ರ ಬರೆದು ಶಾಮನೂರು ಶಿವಶಂಕರಪ್ಪ ಸ್ಪಷ್ಟನೆ ನೀಡಿದ್ದಾರೆ ಎನ್ನಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular