ಶಾಮನೂರು ಶಿವಶಂಕರಪ್ಪ 94ನೇ ಜನ್ಮದಿನಾಚರಣೆ

ದಾವಣಗೆರೆ: ಕಾಂಗ್ರೆಸ್ ಹಿರಿಯ ಶಾಸಕ ಮತ್ತು ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಅಧ್ಯಕ್ಷ ಡಾ. ಶಾಮನೂರು ಶಿವಶಂಕರಪ್ಪ ಅವರ 94ನೇ ಜನ್ಮದಿನಾಚರಣೆ ಕಾರ್ಯಕ್ರಮ ಜೂನ್ 16ರಂದು ದಾವಣಗೆರೆಯಲ್ಲಿ ನಡೆಯಲಿದೆ.

ಮನೆದೇವರು ಹೊಳಲ್ಕೆರೆ ತಾಲೂಕಿನ ಕಲ್ಲೇಶ್ವರ ದೇವಸ್ಥಾನಕ್ಕೆ ಕುಟುಂಬ ಸದಸ್ಯರೊಂದಿಗೆ ತೆರಳಿ ವಿಶೇಷ ಪೂಜೆ ಸಲ್ಲಿಸಿದ ನಂತರ ದಾವಣಗೆರೆಯ ತಮ್ಮ ನಿವಾಸದಲ್ಲಿ ಅಭಿಮಾನಿಗಳು, ಬೆಂಬಲಿಗರು, ಪಕ್ಷದ ಕಾರ್ಯಕರ್ತರು, ಕುಟುಂಬ ಸದಸ್ಯರೊಂದಿಗೆ ಶಾಮನೂರು ಶಿವಶಂಕರಪ್ಪ ಜನ್ಮದಿನ ಆಚರಿಸಿಕೊಳ್ಳಲಿದ್ದಾರೆ.

ಈ ಸಂದರ್ಭದಲ್ಲಿ ವಿವಿಧ ಸೇವಾ ಕಾರ್ಯಗಳನ್ನು ಕೈಗೊಳ್ಳಲಾಗಿದೆ. ಶಾಮನೂರು ಶಿವಶಂಕರಪ್ಪನವರ ಜನ್ಮದಿನಕ್ಕೆ ಶುಭ ಹಾರೈಸಲು ಬರುವ ಅಭಿಮಾನಿಗಳು, ಕಾರ್ಯಕರ್ತರು ಹಣ್ಣು, ಶಾಲು, ಹೂವಿನ ಹಾರ ತರದೆ ಪುಸ್ತಕಗಳನ್ನು ನೀಡಿ ಶುಭಕೋರುವಂತೆ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ ಮನವಿ ಮಾಡಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read