HomeKarnatakaಕಾಂಗ್ರೆಸ್ ನಾಯಕ ಶಾಮನೂರು ಶಿವಶಂಕರಪ್ಪ ಆರೋಗ್ಯದಲ್ಲಿ ಏರುಪೇರು

ಕಾಂಗ್ರೆಸ್ ನಾಯಕ ಶಾಮನೂರು ಶಿವಶಂಕರಪ್ಪ ಆರೋಗ್ಯದಲ್ಲಿ ಏರುಪೇರು

ದಾವಣಗೆರೆ: ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ ಹಾಗೂ ಶಾಸಕ ಶಾಮನೂರು ಶಿವಶಂಕರಪ್ಪ ಅವರ ಆರೋಗ್ಯದಲ್ಲಿ ಏರುಪೇರಾಗಿದ್ದು, ಎಸ್.ಎಸ್. ಹೈಟೆಕ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ.

ಕೆಲ ಸಮಯ ಐಸಿಯುನಲ್ಲಿ ಚಿಕಿತ್ಸೆ ಪಡೆದುಕೊಂಡ ಅವರು ಬೆಂಗಳೂರಿನತ್ತ ಪ್ರಯಾಣ ಬೆಳೆಸಿದ್ದಾರೆ. ಹೃದಯ ಸಂಬಂಧಿ ತೊಂದರೆ, ಕಫ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಅವರಿಗೆ ಉಸಿರಾಟ ಸಮಸ್ಯೆಯಾಗಿ ಎಸ್.ಎಸ್. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಂಡಿದ್ದಾರೆ.

ಅಲ್ಲಿಂದ ಹೆಚ್ಚಿನ ಚಿಕಿತ್ಸೆಗಾಗಿ ಶಾಮನೂರು ಶಿವಶಂಕರಪ್ಪ ಬೆಂಗಳೂರಿಗೆ ತೆರಳಿದ್ದು, ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗುವ ಸಾಧ್ಯತೆ ಇದೆ ಎನ್ನಲಾಗಿದೆ. ವಿಷಯ ತಿಳಿದ ಬೆಂಬಲಿಗರು, ಅಭಿಮಾನಿಗಳು ಎಸ್ಎಸ್. ಆಸ್ಪತ್ರೆ ಬಳಿ ಜಮಾವಣೆಗೊಂಡಿದ್ದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular