BIG NEWS: ಮನೆಯಲ್ಲಿಯೇ ಕುಳಿತು ಜಾತಿ ಗಣತಿ ವರದಿ ತಯಾರಿ: ಸಿದ್ದರಾಮಯ್ಯ ಎಲ್ಲಿ ನಮ್ಮ ಮಾತು ಕೇಳ್ತಾರೆ? ಪರೋಕ್ಷವಾಗಿ ಅಸಮಾಧಾನ ವ್ಯಕ್ತಪಡಿಸಿದ ಶಾಸಕ ಶಾಮನೂರು ಶಿವಶಂಕರಪ್ಪ

ಬೆಂಗಳೂರು: ಜಾತಿ ಗಣತಿ ವರದಿ ಸ್ವೀಕರಿಸಿರುವ ವಿಚಾರವಾಗಿ ಸಿಎಂ ಸಿದ್ದರಾಮಯ್ಯ ವಿರುದ್ಧ ಸ್ವಪಕ್ಷದ ಶಾಸಕರೇ ಗರಂ ಆಗಿದ್ದಾರೆ. ಜಾತಿ ಗಣತಿ ವರದಿ ವೈಜ್ಞಾನಿಕವಾಗಿ ಇಲ್ಲ ಎಂದು ಕಾಂಗ್ರೆಸ್ ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ ಪುನರುಚ್ಛರಿಸಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಶಾಸಕ ಶಾಮನೂರು ಶಿವಶಂಕರಪ್ಪ, ಜಾತಿ ಗಣತಿ ಹೇಗೆ ಅವೈಜ್ಞಾನಿಕವಾಗಿದೆ ಎಂಬುದನ್ನು ತೋರಿಸುತ್ತೇವೆ ಎಂದು ಹೇಳಿದ್ದಾರೆ.

ಇದೇ ವೇಳೆ ಸಿಎಂ ಸಿದ್ದರಾಮಯ್ಯನವರು ಎಲ್ಲಿ ನಮ್ಮ ಮಾತು ಕೇಳುತ್ತಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಜಾತಿ ಗಣತಿ ವರದಿ ಸ್ವೀಕರಿಸಿದ್ದು ತಪ್ಪಲ್ಲ, ಆದರೆ ಅದು ವೈಜ್ಞಾನಿಕವಾಗಿಲ್ಲ. ವೈಜ್ಞಾನಿಕವಾಗಿ ಇರಬೇಕು ಎಂಬುದು ನಮ್ಮ ಅಭಿಪ್ರಾಯ ಎಂದಿದ್ದಾರೆ.

ಈಗ ಲಿಂಗಾಯಿತ ಸಮುದಾಯದಲ್ಲಿಯೇ ಸಾಕಷ್ಟು ಉಪಪಂಗಡಗಳಿವೆ. ನಮ್ಮ ಸಮುದಾಯದ ಜನಸಂಖ್ಯೆಯನ್ನೇ ಕಡಿಮೆ ತೋರಿಸಿರುವ ಮಾಹಿತಿ ಇದೆ. 9 ವರ್ಷದ ಹಿಂದಿನ ಸರ್ವೆಯನ್ನು ಈಗ ವರದಿ ಸಲ್ಲಿಸಲಾಗಿದೆ. ಮನೆಯಲ್ಲಿಯೇ ಕುಳಿತು ಜಾತಿ ಗಣತಿ ವರದಿ ತಯಾರಿಸಿದ್ದಾರೆ ಎಂಬ ಮಾಹಿತಿ ಬಂದಿದೆ. ಸರ್ಕಾರ ಮತ್ತೊಮ್ಮೆ ವೈಜ್ಞಾನಿಕವಾಗಿ ಜಾತಿ ಗಣತಿ ನಡೆಸಬೇಕು ಎಂದು ಆಗ್ರಹಿಸಿದರು.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read