HomeKarnatakaನಾನು ಯಾರಿಗೂ ಬೆಣ್ಣೆ ಹಚ್ಚಿ ಎಂಎಲ್ಸಿ ಆಗಿಲ್ಲ: 7 ಬಾರಿ ಜನರಿಂದ ಆಯ್ಕೆಯಾಗಿದ್ದೇನೆ: ಶಾಮನೂರು ಗುಡುಗು

ನಾನು ಯಾರಿಗೂ ಬೆಣ್ಣೆ ಹಚ್ಚಿ ಎಂಎಲ್ಸಿ ಆಗಿಲ್ಲ: 7 ಬಾರಿ ಜನರಿಂದ ಆಯ್ಕೆಯಾಗಿದ್ದೇನೆ: ಶಾಮನೂರು ಗುಡುಗು

ದಾವಣಗೆರೆ: ವೀರಶೈವ ಲಿಂಗಾಯತ ಸಮುದಾಯದ 7 ಜನ ಸಚಿವ ಸ್ಥಾನದಲ್ಲಿದ್ದಾರೆ. ಇದರ ಬಗ್ಗೆ ನಮ್ಮ ತಕರಾರು ಇಲ್ಲ. ಆದರೆ, ಸಮುದಾಯದ ಐಎಎಸ್, ಐಪಿಎಸ್, ಕೆಎಎಸ್ ಅಧಿಕಾರಿಗಳಿಗೆ ಅನ್ಯಾಯವಾಗಿದೆ ಎಂದು ಶಾಸಕ ಶಾಮನೂರು ಶಿವಶಂಕರಪ್ಪ ದೂರಿದ್ದಾರೆ.

ಯಾವ ಸಮುದಾಯದ ಅಧಿಕಾರಿಗಳನ್ನು ಎಲ್ಲೆಲ್ಲಿ ನಿಯೋಜಿಸಲಾಗಿದೆ ಎಂಬುವುದರ ಬಗ್ಗೆ ನನ್ನಲ್ಲಿ ದಾಖಲೆಗಳಿವೆ. ನಮ್ಮ ಸಮುದಾಯದ ಅಧಿಕಾರಿಗಳಿಗೆ ಪ್ರಮುಖ ಹುದ್ದೆ ನೀಡಿಲ್ಲ. ಈ ವಿಷಯ ರಾಜ್ಯದಲ್ಲಿ ಚರ್ಚೆಯಾಗುತ್ತಿದೆ ಎಂದು ಹೇಳಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಹೆಚ್. ವಿಶ್ವನಾಥ್ ಅವರಂತೆ ನಾನು ಯಾರಿಗೂ ಬೆಣ್ಣೆ ಹಚ್ಚಿ ಎಂಎಲ್ಸಿ ಆಗಿಲ್ಲ. 7 ಬಾರಿ ಜನರಿಂದ ಆಯ್ಕೆಯಾಗಿದ್ದೇನೆ. ನಾನು ಸಮುದಾಯದ ಅಧಿಕಾರಿಗಳ ಬಗ್ಗೆ ಹೇಳಿಕೆ ನೀಡಿದ್ದೇನೆ ಹೊರತೂ ಸಚಿವ ಸ್ಥಾನದ ಬಗ್ಗೆ ಪ್ರಸ್ತಾಪಿಸಿಲ್ಲ. ಆದರೆ ಸಚಿವ ಸ್ಥಾನದ ಬಗ್ಗೆ ಹೇಳಿಕೆ ನೀಡಿದ ವಿಶ್ವನಾಥ್ ಅವರನ್ನು ಹುಚ್ಚಾಸ್ಪತ್ರೆಗೆ ಕಳುಹಿಸಿ ಎಂದು ಶಾಮನೂರು ಶಿವಶಂಕರಪ್ಪ ವಾಗ್ದಾಳಿ ನಡೆಸಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular