HomeLatest NewsBREAKING: ವಿಧಾನಸಭೆ ಕಲಾಪ ನಾಳೆಗೆ ಮುಂದೂಡಿಕೆ

BREAKING: ವಿಧಾನಸಭೆ ಕಲಾಪ ನಾಳೆಗೆ ಮುಂದೂಡಿಕೆ

ಬೆಳಗಾವಿ: ಕಾಂಗ್ರೆಸ್ ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ ವಿಧಿವಶರಾಗಿರುವ ಹಿನ್ನೆಲೆಯಲ್ಲಿ ವಿಧಾನಸಭೆ ಕಲಾಪವನ್ನು ನಾಳೆಗೆ ಮುಂದೂಡಲಾಗಿದೆ.

ಬೆಳಗಾವೊಯ ಸುವರ್ಣಸೌಧದಲ್ಲಿ ವಿಧಾನಮಂಡಲ ಚಳಿಗಾಲದ ಅಧಿವೇಶನ ನಡೆಯುತ್ತಿದ್ದು, ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ ನಿಧನ ಹಿನ್ನೆಲೆಯಲ್ಲಿ ಇಂದು ವಿಧಾನಸಭೆ ಹಾಗೂ ವಿಧಾನಪರಿಷತ್ ನಲ್ಲಿ ಅಗಲಿದ ಹಿರಿಯ ಶಾಸಕರಿಗೆ ಸಂತಾಪ ಸೂಚಿಸಲಾಯಿತು.

ಸಂತಾಪ ಸೂಚನೆ ಸಭೆ ಬಳಿಕ ವಿಧಾನಸಭಾ ಕಲಾಪವನ್ನು ನಾಳೆ ಬೆಳಿಗ್ಗೆ 9:30ಕ್ಕೆ ಮೂಂದೂಡಿ ಸ್ಪೀಕರ್ ಯು.ಟಿ.ಖಾದರ್ ಆದೇಶ ಹೊರಡಿಸಿದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ದಾವಣಗೆರೆಯ ಹೈಸ್ಕೂಲು ಮೈದಾನದಲ್ಲಿ ಶಾಮನೂರು ಶಿವಶಂಕರಪ್ಪನವರ ಪಾರ್ಥೀವ ಶರೀರವನ್ನು ಅಂತಿಮ ದರ್ಶನಕ್ಕೆ ಇಡಲಾಗಿದ್ದು, ಇಂದು ಸಂಜೆ ೪ಗಂಟೆಯವರೆಗೆ ಅಂತಿಮ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ. ಬಳಿಕ ಸಂಜೆ ಕಲ್ಲೇಶ್ವರ ರೈಸ್ ಮಿಲ್ ಆವರಣದಲ್ಲಿ ಪತ್ನಿ ಸಮಾಧಿ ಪಕ್ಕದಲ್ಲಿಯೇ ವೀರಶೈವ ಲಿಂಗಾಯಿತ ಸಂಪ್ರದಾಯದಂತೆ ಅಂತ್ಯಕ್ರಿಯೆ ನಡೆಯಲಿದೆ. ಅಂತ್ಯಕ್ರಿಯೆಯಲ್ಲಿ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್, ಸರ್ಕಾರದ ಸಚಿವರು, ಶಾಸಕರು ಪಾಲ್ಗೊಳ್ಳುವ ಸಾಧ್ಯತೆ ಇದೆ.

For Latest News Updates, Join Our Whatsapp Community🚩
RELATED ARTICLES

Most Popular