ಉತ್ತರ ಪ್ರದೇಶದಲ್ಲಿ ನಾಚಿಕೆಗೇಡಿ ಕೃತ್ಯ: ತರಗತಿಯಲ್ಲೇ ಕುಡಿದು ತೂರಾಡಿದ ಶಿಕ್ಷಕರು | Watch Video

ಉತ್ತರ ಪ್ರದೇಶದ ಅಮ್ರೋಹಾ ಜಿಲ್ಲೆಯ ಸರ್ಕಾರಿ ಶಾಲೆಯೊಂದರಲ್ಲಿ ಇಬ್ಬರು ಶಿಕ್ಷಕರು ತರಗತಿಯ ಕೋಣೆಯೊಳಗೆ ಮದ್ಯ ಸೇವಿಸುತ್ತಿದ್ದ ವಿಡಿಯೋ ವೈರಲ್ ಆದ ಹಿನ್ನೆಲೆಯಲ್ಲಿ ಅವರನ್ನು ಅಮಾನತುಗೊಳಿಸಲಾಗಿದೆ ಎಂದು ಅಧಿಕಾರಿಗಳು ಬುಧವಾರ ತಿಳಿಸಿದ್ದಾರೆ.

ಈ ಘಟನೆ ಹಸನ್‌ಪುರ ಬ್ಲಾಕ್‌ನ ಫಯ್ಯಾಜ್‌ನಗರ ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ನಡೆದಿದೆ. ಗ್ರಾಮಸ್ಥರ ಪ್ರಕಾರ, ಶಾಲೆಯ ಮುಖ್ಯೋಪಾಧ್ಯಾಯ ಅರವಿಂದ್ ಕುಮಾರ್ ಮತ್ತು ಹತ್ತಿರದ ಸುತಾರಿ ಗ್ರಾಮದ ಶಾಲೆಯ ಮತ್ತೊಬ್ಬ ಮುಖ್ಯೋಪಾಧ್ಯಾಯ ಅನುಪಾಲ್ ಅವರು ಪ್ರತಿದಿನ ಮಕ್ಕಳ ಎದುರಿನಲ್ಲೇ ಶಾಲಾ ಆವರಣದಲ್ಲಿ ಒಟ್ಟಾಗಿ ಮದ್ಯ ಸೇವಿಸುತ್ತಿದ್ದರು ಎನ್ನಲಾಗಿದೆ.

ಶಿಕ್ಷಕರಿಬ್ಬರು ತರಗತಿಯ ಕೋಣೆಯೊಳಗೆ ಕುಡಿಯುತ್ತಿರುವುದನ್ನು ಗ್ರಾಮಸ್ಥರು ವಿಡಿಯೋ ಚಿತ್ರೀಕರಿಸಿ ಜಿಲ್ಲಾಧಿಕಾರಿಗೆ ಸಲ್ಲಿಸಿದ್ದಾರೆ. ಪ್ರಾಥಮಿಕ ವಿಚಾರಣೆಯ ನಂತರ, ಜಿಲ್ಲಾಧಿಕಾರಿ ನಿಧಿ ಗುಪ್ತಾ ವತ್ಸ್ ಅವರು ಇಬ್ಬರೂ ಶಿಕ್ಷಕರನ್ನು ಅಮಾನತುಗೊಳಿಸಿ ಆದೇಶ ಹೊರಡಿಸಿದ್ದಾರೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿರುವ ವಿಡಿಯೋದಲ್ಲಿ, ಇಬ್ಬರು ಮುಖ್ಯೋಪಾಧ್ಯಾಯರು ವಿದ್ಯಾರ್ಥಿಗಳ ಸಮ್ಮುಖದಲ್ಲಿ ತರಗತಿಯ ಕೋಣೆಯಲ್ಲಿ ಮೇಜಿನ ಮೇಲೆ ಮದ್ಯ ಸುರಿದುಕೊಂಡು ಸೇವಿಸುತ್ತಿರುವುದು ಸ್ಪಷ್ಟವಾಗಿ ಕಾಣುತ್ತದೆ.

ಈ ಬಗ್ಗೆ ಗ್ರಾಮಸ್ಥರು ಜಿಲ್ಲಾಧಿಕಾರಿಗಳಿಗೂ ದೂರು ನೀಡಿದ್ದರು. ಬ್ಲಾಕ್ ಶಿಕ್ಷಣಾಧಿಕಾರಿಗಳು ಈ ವಿಷಯದ ತನಿಖೆ ನಡೆಸಿದ್ದು, ತನಿಖಾ ವರದಿಯ ಆಧಾರದ ಮೇಲೆ ಇಬ್ಬರೂ ಶಿಕ್ಷಕರ ವಿರುದ್ಧ ಕ್ರಮ ಕೈಗೊಳ್ಳಲಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read