ಭಾರತೀಯ ಕ್ರಿಕೆಟಿಗ ಮೊಹಮ್ಮದ್ ಶಮಿಐವರ ಪತ್ನಿ ಹಸೀನ್ ಜಹಾನ್ ಮತ್ತು ಮಗಳು ಅರ್ಷಿ ಜಹಾನ್ ಹೊಸ ಕಾನೂನು ಸಂಕಷ್ಟಕ್ಕೆ ಸಿಲುಕಿದ್ದಾರೆ. ನೆರೆಹೊರೆಯವರ ಮೇಲೆ ಹಲ್ಲೆ ಮತ್ತು ಕೊಲೆಗೆ ಯತ್ನಿಸಿದ ಆರೋಪದಡಿ ಅವರ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಪಶ್ಚಿಮ ಬಂಗಾಳದ ಬೀರ್ಭೂಮ್ ಜಿಲ್ಲೆಯಲ್ಲಿ ನಡೆದ ಈ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ನಂತರ ಪೊಲೀಸರು ದೂರು ದಾಖಲಿಸಿಕೊಂಡು ಕ್ರಮ ಕೈಗೊಂಡಿದ್ದಾರೆ.
ಘಟನೆ ಹಿನ್ನೆಲೆ: ವರದಿಯಾದ ಪ್ರಕಾರ, ಈ ವಿವಾದ ಸುರಿ ಪಟ್ಟಣದ 5ನೇ ವಾರ್ಡ್‌ನಲ್ಲಿರುವ ಭೂಮಿಯೊಂದಕ್ಕೆ ಸಂಬಂಧಿಸಿದೆ. ಹಸೀನ್ ಜಹಾನ್, ತಮ್ಮ ಮಗಳು ಅರ್ಷಿ ಹೆಸರಿನಲ್ಲಿ ನೋಂದಾಯಿತ ಜಾಗದಲ್ಲಿ ನಿರ್ಮಾಣ ಕಾರ್ಯ ಆರಂಭಿಸಿದ್ದರು. ಆದರೆ, ನೆರೆಹೊರೆಯವರಾದ ದಲಿಯಾ ಖಾತೂನ್, ಈ ಭೂಮಿ ವಿವಾದಿತ ಎಂದು ಆಕ್ಷೇಪ ವ್ಯಕ್ತಪಡಿಸಿದ್ದರು. ಈ ಭಿನ್ನಾಭಿಪ್ರಾಯ ತೀವ್ರಗೊಂಡು ದೈಹಿಕ ಜಗಳಕ್ಕೆ ತಿರುಗಿದೆ.
ವೈರಲ್ ವಿಡಿಯೋದಲ್ಲಿ ಏನಿದೆ ? ಆನ್‌ಲೈನ್‌ನಲ್ಲಿ ಹರಿದಾಡುತ್ತಿರುವ ವಿಡಿಯೋದಲ್ಲಿ, ಹಸೀನ್ ಜಹಾನ್ ಕಪ್ಪು ಟಿ-ಶರ್ಟ್ ಮತ್ತು ಜೀನ್ಸ್‌ನಲ್ಲಿ ಕಟ್ಟಡ ಸ್ಥಳದಿಂದ ಇಟ್ಟಿಗೆಗಳನ್ನು ತೆಗೆಯುತ್ತಿರುವುದು ಕಂಡುಬರುತ್ತದೆ. ದಲಿಯಾ ಖಾತೂನ್ ಮಧ್ಯಪ್ರವೇಶಿಸಲು ಯತ್ನಿಸಿದಾಗ, ಅವರಿಬ್ಬರ ನಡುವೆ ಜಗಳ ಶುರುವಾಗುತ್ತದೆ.
ದಾಖಲಾದ ಎಫ್‌ಐಆರ್: ಘಟನೆಯ ನಂತರ, ದಲಿಯಾ ಖಾತೂನ್ ಹಸೀನ್ ಮತ್ತು ಅರ್ಷಿ ಇಬ್ಬರ ವಿರುದ್ಧವೂ ಎಫ್‌ಐಆರ್ ದಾಖಲಿಸಿದ್ದಾರೆ. ಹಲ್ಲೆ ಮತ್ತು ಕೊಲೆ ಯತ್ನದಂತಹ ಗಂಭೀರ ಆರೋಪಗಳನ್ನು ಎಫ್‌ಐಆರ್‌ನಲ್ಲಿ ಸೇರಿಸಲಾಗಿದೆ.
ದಲಿಯಾ ಪೊಲೀಸರಿಗೆ ನೀಡಿರುವ ಹೇಳಿಕೆಯಲ್ಲಿ, “ಅವರು ನನ್ನ ಮೇಲೆ ಹಲ್ಲೆ ಮಾಡಿದರು, ನಿರ್ಮಾಣ ಕಾರ್ಯವನ್ನು ತಡೆಯಲು ಪ್ರಯತ್ನಿಸಿದರು ಮತ್ತು ಹಿಂಸಾತ್ಮಕವಾಗಿ ವರ್ತಿಸಿದರು. ನಾನು ನನ್ನ ಜೀವಕ್ಕೆ ಹೆದರಿದ್ದೆ” ಎಂದು ತಿಳಿಸಿದ್ದಾರೆ. ಅಲ್ಲದೆ, ಹಸೀನ್ ವಿವಾದಿತ ಭೂಮಿಗೆ ಸಂಬಂಧಿಸಿದಂತೆ ಕಾನೂನುಬದ್ಧ ಮಾಲೀಕತ್ವದ ಪುರಾವೆಯನ್ನು ಒದಗಿಸಿಲ್ಲ ಎಂದು ಅವರು ಹೇಳಿದ್ದಾರೆ.
ಪಶ್ಚಿಮ ಬಂಗಾಳ ಪೊಲೀಸರು ಎಫ್‌ಐಆರ್ ದಾಖಲಾಗಿರುವುದನ್ನು ದೃಢಪಡಿಸಿದ್ದು, ತನಿಖೆ ನಡೆಯುತ್ತಿದೆ ಎಂದು ತಿಳಿಸಿದ್ದಾರೆ. ಅಧಿಕಾರಿಗಳು ವೈರಲ್ ವಿಡಿಯೋವನ್ನು ಪರಿಶೀಲಿಸುತ್ತಿದ್ದಾರೆ ಮತ್ತು ಸಾಕ್ಷಿಗಳೊಂದಿಗೆ ಮಾತನಾಡುತ್ತಿದ್ದಾರೆ. ಆದರೆ, ಇದುವರೆಗೆ ಯಾರನ್ನೂ ಬಂಧಿಸಿಲ್ಲ.
#Shami's ex-wife, Hasin Jahan, was caught on camera raising her hands on a neighbour in a fight. pic.twitter.com/CwQ1CNw0WG
— ShoneeKapoor (@ShoneeKapoor) July 16, 2025