HomeLatest NewsBIG NEWS: ಮಠದ ಆವರಣದಲ್ಲಿ ಗಾಳಿಯಲ್ಲಿ ಗುಂಡು ಹಾರಿಸಿ ಬಿಲ್ಡಪ್ ಕೊಟ್ಟ ಶಾಂತಲಿಂಗ ಸ್ವಾಮೀಜಿ

BIG NEWS: ಮಠದ ಆವರಣದಲ್ಲಿ ಗಾಳಿಯಲ್ಲಿ ಗುಂಡು ಹಾರಿಸಿ ಬಿಲ್ಡಪ್ ಕೊಟ್ಟ ಶಾಂತಲಿಂಗ ಸ್ವಾಮೀಜಿ

ಕಲಬುರಗಿ: ಸ್ವಾಮೀಜಿಯೊಬ್ಬರು ಮಠದ ಆವರಣದಲ್ಲಿ ನಿಂತು ಬಂದೂಕಿನಿಂದ ಗಾಳಿಯಲ್ಲಿ ಗುಂಡು ಹಾರಿಸಿರುವ ಘಟನೆ ಕಲಬುರಗಿಯಲ್ಲಿ ನಡೆದಿದೆ.

ಕಲಬುರಗಿ ಜಿಲ್ಲೆಯ ಉಡಚಣ ಗ್ರಾಮದ ಹಿರೇಮಠದ ಶಾಂತಲಿಂಗ ಸ್ವಾಮೀಜಿ ಮಠದ ಆವರಣದಲ್ಲಿ ನಿಂತು ಗಾಳಿಯಲ್ಲಿ ಗುಂಡು ಹೊಡೆದಿರುವ ವಿಡಿಯೋ ವೈರಲ್ ಆಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಕೆಲ ದಿನಗಳ ಹಿಂದೆ ಶಾಂತಲಿಂಗ ಸ್ವಾಮೀಜಿ ಕುಡಿದು ಮಠದಲ್ಲಿ ರಂಪಾಟ ನಡೆಸಿದ್ದರು. ಈ ಹಿನ್ನೆಲೆಯಲ್ಲಿ ಗ್ರಾಮಸ್ಥರು, ಭಕ್ತರು ಅವರನ್ನು ಮಠದಿಂದ ಹೊರಹಾಕಿದ್ದರು. ಹೊಸ ಪೀಠಾಧಿಪತಿಗಳ ನೇಮಕ ಮಾಡುವ ಬಗ್ಗೆ ಚರ್ಚೆ ನಡೆದಿತ್ತು. ಈ ಬೆಳವಣಿಗೆ ಬೆನ್ನಲ್ಲೇ ಶಾಂತಲಿಂಗ ಸ್ವಾಮೀಜಿ ವಾರದ ಹಿಂದಷ್ಟೇ ಮಠದಲ್ಲಿ ಮತ್ತೆ ಪ್ರತ್ಯಕ್ಷರಾಗಿದ್ದರು. ಇದೀಗ ಏಕಾಏಕಿ ಮಠದ ಆವರಣದಲ್ಲಿ ನಿಂತು ಗುಂಡು ಹಾರಿಸಿದ್ದಾರೆ.

ವಿರೋಧಿಗಳನ್ನು ಹೆದರಿಸುವ ನಿಟ್ಟಿನಲ್ಲಿ ಸ್ವಾಮೀಜಿ ಗಾಳಿಯಲ್ಲಿ ಗುಂಡು ಹೊಡೆದು ಬಿಲ್ಡಪ್ ತೆಗೆದುಕೊಂಡಿರುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. ಅದೇನೇ ಇದ್ದರೂ ಸ್ವಾಮೀಜಿಯಾಗಿದ್ದವರು ಮದ್ಯಪಾನ ಮಾಡಿ ಗಲಾಟೆ ಮಾಡಿದ್ದೂ ಅಲ್ಲದೇ, ಈಗ ಬಂದೂಕು ಕೈಯಲ್ಲಿ ಹಿಡಿದು ಗಾಳಿಯಲ್ಲಿ ಗುಂಡು ಹಾರಿಸಿ ಬೆದರಿಸುವ ಕೆಲಸ ಮಾಡುತ್ತಿರುವುದು ಸ್ವಾಮೀಜಿಗಳ ನಡೆಗೆ ತೀವ್ರ ಆಕ್ರೋಶ ವ್ಯಕ್ತವಾಗಿದೆ.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular