HomeIndiaBIG NEWS: ಎನ್ ಸಿಪಿ ಅಧ್ಯಕ್ಷ ಶರದ್ ಪವಾರ್ ಆರೋಗ್ಯದಲ್ಲಿ ಏರುಪೇರು: ಆಸ್ಪತ್ರೆಗೆ ದಾಖಲು

BIG NEWS: ಎನ್ ಸಿಪಿ ಅಧ್ಯಕ್ಷ ಶರದ್ ಪವಾರ್ ಆರೋಗ್ಯದಲ್ಲಿ ಏರುಪೇರು: ಆಸ್ಪತ್ರೆಗೆ ದಾಖಲು

ಮುಂಬೈ: ಎನ್ ಸಿಪಿ ಅಧ್ಯಕ್ಷ, ರಾಜ್ಯಸಭಾ ಸಂಸದ ಶರದ್ ಪವಾರ್ ಆರೋಗ್ಯದಲ್ಲಿ ಏರುಪೇರಾಗಿದ್ದು, ಅವರನ್ನು ಮುಂಬೈನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

85 ವರ್ಷದ ಶರದ್ ಪವಾರ್ ಅವರಿಗೆ ನಿಯಮಿತ ಆರೋಗ್ಯ ತಪಾಸಣೆ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ. ಎರಡು ದಿನಗಳ ಹಿಂದೆ ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅವರು ಆರೋಗ್ಯ ತಪಾಸಣೆಗಾಗಿ ಆಸ್ಪತ್ರೆಯಲ್ಲಿದ್ದಾರೆ, ಗಂಭೀರವಾದ ಆರೋಗ್ಯ ಸಮಸ್ಯೆಯೇನೂ ಇಲ್ಲ ಎಂದು ಮೂಲಗಳು ತಿಳಿಸಿವೆ.

ಶರದ್ ಪವಾರ್ ಇತ್ತೀಚೆಗೆ ವ್ಹೀಲ್‌ಚೇರ್‌ನಲ್ಲಿಯೇ ಕುಳಿತು ರಾಜ್ಯಸಭಾ ಸದಸ್ಯರಾಗಿ ಪ್ರಮಾಣ ವಚನ ಸ್ವೀಕರಿಸಿದ್ದರು. ಕಳೆದ ಫೆಬ್ರವರಿಯಲ್ಲಿ ನಿರ್ಜಲೀಕರಣ ಸಮಸ್ಯೆಯಿಂದಾಗಿ ಪುಣೆಯಲ್ಲಿ ಎರಡು ಬಾರಿ ಆಸ್ಪತ್ರೆಗೆ ದಾಖಲಾಗಿದ್ದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular