HomeEntertainmentಏಪ್ರಿಲ್ 5 ಕ್ಕೆ ತೆರೆ ಮೇಲೆ ಬರಲಿದೆ ಶರಣ್ ಅಭಿನಯದ 'ಛೂಮಂತರ್'

ಏಪ್ರಿಲ್ 5 ಕ್ಕೆ ತೆರೆ ಮೇಲೆ ಬರಲಿದೆ ಶರಣ್ ಅಭಿನಯದ ‘ಛೂಮಂತರ್’

ಕರ್ವ ನವನೀತ್ ನಿರ್ದೇಶನದ ಶರಣ್ ಅಭಿನಯದ ಬಹು ನಿರೀಕ್ಷಿತ ‘ಛೂಮಂತರ್’ ಚಿತ್ರದ ಬಿಡುಗಡೆ ದಿನಾಂಕವನ್ನು ಘೋಷಣೆ ಮಾಡಲಾಗಿದೆ. ಮುಂದಿನ ತಿಂಗಳು ಏಪ್ರಿಲ್ 5 ಕ್ಕೆ ಈ ಸಿನಿಮಾ ರಾಜ್ಯಾದ್ಯಂತ ತೆರೆ ಮೇಲೆ ಬರಲಿದೆ. ಈ ಕುರಿತು ಚಿತ್ರ ತಂಡ ಸೋಶಿಯಲ್ ಮೀಡಿಯಾದಲ್ಲಿ ತಿಳಿಸಿದೆ.

ತರುಣ್ ಸ್ಟುಡಿಯೋಸ್ ಬ್ಯಾನರ್ ನಲ್ಲಿ ಮಾನಸ ತರುಣ್ ಮತ್ತು ತರುಣ್ ಶಿವಪ್ಪ ಈ ಸಿನಿಮಾ ನಿರ್ಮಾಣ ಮಾಡಿದ್ದು, ಶರಣ್ ಸೇರಿದಂತೆ ಮೇಘನಾ ಗಾವಂಕರ್, ಪ್ರಭು ಮುಂಡ್ಕರ್, ಅದಿತಿ ಪ್ರಭುದೇವ, ಚಿಕ್ಕಣ್ಣ ಸೇರಿದಂತೆ ಮೊದಲಾದ ಕಲಾವಿದರು ತೆರೆ ಹಂಚಿಕೊಂಡಿದ್ದಾರೆ. ಚಂದನ್ ಶೆಟ್ಟಿ ಸಂಗೀತ ಸಂಯೋಜನೆ ನೀಡಿದ್ದು, ವೆಂಕಿ ಸಂಕಲನ, ಅನುಪ್ ಛಾಯಾಗ್ರಹಣ, ರವಿವರ್ಮ ಸಾಹಸ ನಿರ್ದೇಶನ, ಯೋಗಾನಂದ ಮತ್ತು ಶ್ರೀಹರ್ಷ ಅವರ ಸಂಭಾಷಣೆ ಇದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular