HomeKarnatakaಎಲ್ಲಾ ಧರ್ಮಗಳಿಗಿಂತ ಇಸ್ಲಾಂ ಶ್ರೇಷ್ಠ ಧರ್ಮ ಹೇಳಿಕೆ ವಿವಾದ: ಸಚಿವ ಬಸವರಾಜ ರಾಯರೆಡ್ಡಿ ಯೂಟರ್ನ್

ಎಲ್ಲಾ ಧರ್ಮಗಳಿಗಿಂತ ಇಸ್ಲಾಂ ಶ್ರೇಷ್ಠ ಧರ್ಮ ಹೇಳಿಕೆ ವಿವಾದ: ಸಚಿವ ಬಸವರಾಜ ರಾಯರೆಡ್ಡಿ ಯೂಟರ್ನ್

ಕೊಪ್ಪಳ: ಇಸ್ಲಾಂ ಧರ್ಮದ ಕುರಿತು ಕೆಲವರು ಅಪಪ್ರಚಾರ ಮಾಡುತ್ತಿದ್ದು, ಜಗತ್ತಿನ ಎಲ್ಲಾ ಧರ್ಮಗಳಿಗಿಂತ ಇಸ್ಲಾಂ ಶ್ರೇಷ್ಠ ಧರ್ಮವಾಗಿದೆ ಎಂದು ಉನ್ನತ ಶಿಕ್ಷಣ ಸಚಿವ ಬಸವರಾಜ ರಾಯರೆಡ್ಡಿ ನೀಡಿದ ಹೇಳಿಕೆ ವಿವಾದಕ್ಕೆ ಕಾರಣವಾಗುತ್ತಿದ್ದಂತೆ ಯೂಟರ್ನ್ ತೆಗೆದುಕೊಂಡಿದ್ದಾರೆ. ಶರಣ ತತ್ವವೇ ಬೆಸ್ಟ್ ಎಂದು ಹೇಳಿದ್ದಾರೆ.

ಕೊಪ್ಪಳದ ಕುಕನೂರಿನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಬಸವರಾಜ ರಾಯರೆಡ್ಡಿ, ನನಗೆ ಮೆಕ್ಕಾಗೆ ಭೇಟಿ ನೀಡುವ ಯೋಚನೆ ಇದೆ ಎಂದು ಇಸ್ಲಾಂ ಧರ್ಮದ ಬಗ್ಗೆ ಮೆಚ್ಚುಗೆಯ ಮಾತುಗಳನಾಡಿದ್ದರು. ಇಸ್ಲಾಂ ಮಾನವೀಯ ಮೌಲ್ಯಗಳು ಒಳಗೊಂಡ ಶ್ರೇಷ್ಠ ಧರ್ಮವಾಗಿದೆ ಎಂದು ಹೇಳಿದ್ದು, ತಮ್ಮ ಹೇಳಿಕೆ ವಿವಾದಕ್ಕೆ ಕಾರಣವಾದ ಬೆನ್ನಲ್ಲೇ ಸ್ಪಷ್ಟನೆ ನೀಡಿದ್ದಾರೆ.

ಯಾವುದೇ ಧರ್ಮವನ್ನು ಕಡಿಮೆ ಎಂದು ನಾನು ಹೇಳಿಲ್ಲ. ಎಲ್ಲಾ ಧರ್ಮಗಳ ಉತ್ತಮ ವಿಚಾರಗಳನ್ನು ಗೌರವಿಸುವುದಾಗಿ ತಿಳಿಸಿದ್ದಾರೆ. ಸಾಂದರ್ಭಿಕವಾಗಿ ಮಾತನಾಡುವ ವೇಳೆ ಇಸ್ಲಾಂ ಧರ್ಮದಲ್ಲಿರುವ ಕೆಲವು ಉತ್ತಮ ವಿಚಾರಗಳ ಬಗ್ಗೆ ಹೇಳಿದ್ದಾಗಿ ಅವರು ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಎಲ್ಲಾ ಧರ್ಮಗಳು ಶ್ರೇಷ್ಠ. ಇಸ್ಲಾಂ ಧರ್ಮದಲ್ಲಿಯೂ ಶ್ರೇಷ್ಠ ವಿಚಾರಗಳಿವೆ ಎಂದು ನಾನು ಹೇಳಿದ್ದೇನೆ. ಬೇರೆ ಧರ್ಮಗಳು ಕಡಿಮೆ ಎಂದು ಹೇಳಿಲ್ಲ. ಇಸ್ಲಾಂ, ಕ್ರೈಸ್ತ, ಯೆಹೂದಿ ಧರ್ಮಗಳ ಬಗ್ಗೆ ಅಧ್ಯಯನ ಮಾಡುವೆ ಎಂದು ವಚನಗಳನ್ನು ಉಲ್ಲೇಖಿಸಿದ ಸಚಿವರು, ಮನುಷ್ಯತ್ವ ಮತ್ತು ಉತ್ತಮ ವಿಚಾರಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳುವುದು ಮುಖ್ಯ ಎಂದು ಹೇಳಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

Most Popular