HomeKarnatakaಬಿಜೆಪಿ ಶಾಸಕ ಶರಣು ಸಲಗರ್ ಗೆ ಜಾಮೀನು ರಹಿತ ವಾರಂಟ್ ಜಾರಿ ಮಾಡಿದ ಕೋರ್ಟ್

ಬಿಜೆಪಿ ಶಾಸಕ ಶರಣು ಸಲಗರ್ ಗೆ ಜಾಮೀನು ರಹಿತ ವಾರಂಟ್ ಜಾರಿ ಮಾಡಿದ ಕೋರ್ಟ್

ಬೀದರ್: ವಿಚಾರಣೆಗೆ ಗೈರಾದ ಹಿನ್ನೆಲೆ ಬಸವಕಲ್ಯಾಣ ಬಿಜೆಪಿ ಶಾಸಕ ಶರಣು ಸಲಗರ್‌ ವಿರುದ್ಧ ಕೋರ್ಟ್ ಜಾಮೀನು ರಹಿತ ವಾರಂಟ್ ಜಾರಿ ಮಾಡಿದೆ.

ಅಕ್ರಮವಾಗಿ ಗೋಹತ್ಯೆ ಆರೋಪ ಪ್ರಕರಣವನ್ನು ತನಿಖೆ ನಡೆಸಿದ ಪೊಲೀಸರು ಈಗಾಗಲೇ ಕೋರ್ಟ್‌ಗೆ ದೋಷಾರೋಪ ಪಟ್ಟಿ ಸಲ್ಲಿಸಿದ್ದರು. ಈ ಸಂಬಂಧ ನಡೆಯಬೇಕಿದ್ದ ಸಾಕ್ಷ್ಯ ವಿಚಾರಣೆಗೆ ಶಾಸಕ ಶರಣು ಸಲಗರ್ ಗೈರಾಗಿದ್ದು, ಈ ಹಿನ್ನೆಲೆ ಬೆಂಗಳೂರಿನ 42ನೇ ಎಸಿಜೆಎಂ ಕೋರ್ಟ್‌ ಜಾಮೀನು ರಹಿತ ವಾರಂಟ್ ಜಾರಿ ಮಾಡಿದೆ.

2023ರ ಜು.1ರಂದು ಬಕ್ರೀದ್ ಹಬ್ಬದ ವೇಳೆ ಅಕ್ರಮವಾಗಿ ಗೋಹತ್ಯೆ ಮಾಡಿದ್ದಾರೆಂದು ಆರೋಪಿಸಿ, ಗಲಾಟೆ ಮಾಡಿದ್ದರು. ಮುಸ್ಲಿಂ ಸಮುದಾಯದ ಮನೆಯೊಂದಕ್ಕೆ ಹೋಗಿ ಗೋಹತ್ಯೆ ತಡೆದಾಗ ಗಲಾಟೆ ಶುರುವಾಗಿತ್ತು. ಈ ಸಂಬಂಧ ಶಾಸಕರು ಮತ್ತು ಅವರ ಬೆಂಬಲಿಗರ ವಿರುದ್ಧ ಪೊಲೀಸರು ಎಫ್‌ಐಆರ್ ದಾಖಲಿಸಿದ್ದರು. ಈ ಪ್ರಕರಣದ ವಿಚಾರಣೆಗೆ ಶರಣು ಸಲಗರ್ ಕೋರ್ಟ್ ಗೆ ಹಾಜರಾಗದೇ ಗೈರಾಗಿದ್ದು, ಈ ಹಿನ್ನೆಲೆಯಲ್ಲಿ ವಾರಂಟ್ ಜಾರಿಯಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular