HomeKarnatakaಜಲಪಾತದಲ್ಲಿ ಜಾರಿ ಬಿದ್ದ ಶರತ್ ಶವ ಪತ್ತೆ: ಮರಣೋತ್ತರ ಪರೀಕ್ಷೆ ನಡೆಸಿ ಭದ್ರಾವತಿಗೆ ರವಾನೆ

ಜಲಪಾತದಲ್ಲಿ ಜಾರಿ ಬಿದ್ದ ಶರತ್ ಶವ ಪತ್ತೆ: ಮರಣೋತ್ತರ ಪರೀಕ್ಷೆ ನಡೆಸಿ ಭದ್ರಾವತಿಗೆ ರವಾನೆ

ಉಡುಪಿ: ಉಡುಪಿ ಜಿಲ್ಲೆ ಬೈಂದೂರು ತಾಲೂಕಿನ ಕೊಲ್ಲೂರು ಸಮೀಪದ ಅರಿಶಿಣಗುಂಡಿ ಫಾಲ್ಸ್ ನಲ್ಲಿ ಜಾರಿ ಬಿದ್ದು, ನಾಪತ್ತೆಯಾಗಿದ್ದ ಶಿವಮೊಗ್ಗ ಜಿಲ್ಲೆ ಭದ್ರಾವತಿಯ ಶರತ್ ಮೃತದೇಹ ಪತ್ತೆಯಾಗಿದೆ.

ಜಾರಿ ಬಿದ್ದ ಸ್ಥಳದಿಂದ 200 ಮೀ. ದೂರದ ಮರದ ಪೊಟರೆ, ಬಂಡೆಯ ಸಂದಿಯಲ್ಲಿ ಶರತ್ ಮೃತದೇಹ ಕಂಡು ಬಂದಿದ್ದು, ಪೊಲೀಸರು, ಅರಣ್ಯ ಇಲಾಖೆ ಸಿಬ್ಬಂದಿ ಸ್ಥಳೀಯರ ನೆರವಿನಿಂದ ಶವವನ್ನು ಹೊರ ತೆಗೆದಿದ್ದು, ಅರಣ್ಯದಲ್ಲೇ ಮರಣೋತ್ತರ ಪರೀಕ್ಷೆ ನಡೆಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಶವ ಪರೀಕ್ಷೆಯ ಬಳಿಕ ಆಂಬುಲೆನ್ಸ್ ನಲ್ಲಿ ಶರತ್ ಮೃತದೇಹವನ್ನು ಶಿವಮೊಗ್ಗ ಜಿಲ್ಲೆ ಭದ್ರಾವತಿಯಲ್ಲಿರುವ ನಿವಾಸಕ್ಕೆ ರವಾನೆ ಮಾಡಲಾಗಿದೆ. ಕಳೆದ ಭಾನುವಾರ ಜಲಪಾತದ ಬಂಡೆಯ ಬಳಿ ರೀಲ್ಸ್ ಮಾಡಲು ಹೋಗಿ ಶರತ್ ಜಾರಿ ಬಿದ್ದು, ನೀರಿನ ರಭಸಕ್ಕೆ ಕೊಚ್ಚಿ ಹೋಗಿದ್ದರು.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular