HomeKarnatakaಸಚಿವರ ಹಸ್ತಕ್ಷೇಪದಿಂದ ನೀಡಿದ್ದ ಅನುದಾನಕ್ಕೆ ತಡೆ: ಶಾಸಕ ಶರತ್ ಆಕ್ರೋಶ; ಗಾಂಧಿ ಪ್ರತಿಮೆ ಎದುರು ಧರಣಿ

ಸಚಿವರ ಹಸ್ತಕ್ಷೇಪದಿಂದ ನೀಡಿದ್ದ ಅನುದಾನಕ್ಕೆ ತಡೆ: ಶಾಸಕ ಶರತ್ ಆಕ್ರೋಶ; ಗಾಂಧಿ ಪ್ರತಿಮೆ ಎದುರು ಧರಣಿ

ಬೆಂಗಳೂರು: ಶಾಸಕ ಶರತ್ ಬಚ್ಚೇಗೌಡ ಅವರಿಗೆ ನೀಡಿದ ಅನುದಾನಕ್ಕೆ ತಡೆ ನೀಡಿದ ಆರೋಪ ಕೇಳಿ ಬಂದಿದೆ. ಅನುದಾನಕ್ಕೆ ತಡೆ ನೀಡಿರುವುದಕ್ಕೆ ಶಾಸಕ ಶರತ್ ಆಕ್ರೋಶ ವ್ಯಕ್ತಪಡಿಸಿದ್ದು, ಏಕಾಂಗಿಯಾಗಿ ಪ್ರತಿಭಟನೆ ಆರಂಭಿಸಿದ್ದಾರೆ.

ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆ ಕ್ಷೇತ್ರದ ಪಕ್ಷೇತರ ಶಾಸಕ ಶರತ್ ಬಚ್ಚೇಗೌಡ ವಿಧಾನಸೌಧದ ಆವರಣದಲ್ಲಿರುವ ಗಾಂಧಿ ಪ್ರತಿಮೆ ಮುಂಭಾಗ ಧರಣಿ ಕೈಗೊಂಡಿದ್ದಾರೆ. ಜಿಲ್ಲಾ ಪಂಚಾಯಿತಿ ವ್ಯಾಪ್ತಿಯ 27 ರಸ್ತೆ ಕಾಮಗಾರಿಗಳಿಗೆ 10 ಕೋಟಿ ರೂ. ಅನುದಾನ ಬಿಡುಗಡೆ ಮಾಡಿದ್ದು, ಅನುದಾನ ಬಿಡುಗಡೆಗೆ ಸಹಿ ಹಾಕಿದ ನಂತರ ಅನುದಾನಕ್ಕೆ ತಡೆ ನೀಡಿದ ಆರೋಪ ಕೇಳಿ ಬಂದಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಸಚಿವ ಎಂಟಿಬಿ ನಾಗರಾಜ್ ಹಸ್ತಕ್ಷೇಪದಿಂದ ಹಣ ಬಿಡುಗಡೆ ಮಾಡದ ಆರೋಪ ಕೇಳಿ ಬಂದಿದೆ. ಹಣ ಬಿಡುಗಡೆಗೆ ಒತ್ತಾಯಿಸಿ ಶಾಸಕ ಶರತ್ ಬಚ್ಚೇಗೌಡ ಪ್ರತಿಭಟನೆ ಕೈಗೊಂಡಿದ್ದಾರೆ. ಅಭಿವೃದ್ಧಿ ವಿಚಾರದಲ್ಲಿ ಹೊಸಕೋಟೆ ಕ್ಷೇತ್ರಕ್ಕೆ ತಾರತಮ್ಯ ಮಾಡಲಾಗುತ್ತಿದೆ ಎಂದು ದೂರಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular