32ನೇ ವಸಂತಕ್ಕೆ ಕಾಲಿಟ್ಟ ನಟಿ ಅದಾ ಶರ್ಮಾ

ತೆಲುಗು, ತಮಿಳು ಮತ್ತು ಹಿಂದಿ ಚಿತ್ರರಂಗದ ಬೇಡಿಕೆಯ ನಟಿ ಅದಾ ಶರ್ಮಾ ಇಂದು 32ನೇ ವಸಂತಕ್ಕೆ ಕಾಲಿಟ್ಟಿದ್ದು, ತಮ್ಮ  ಸ್ನೇಹಿತರೊಂದಿಗೆ ಸರಳವಾಗಿ ಹುಟ್ಟುಹಬ್ಬ ಆಚರಿಸಿದ್ದಾರೆ.

2008ರಲ್ಲಿ ತೆರೆ ಕಂಡ ವಿಕ್ರಂ ಭಟ್ ನಿರ್ದೇಶನದ ‘1920’ ಎಂಬ ಹಾರರ್ ಚಿತ್ರದ ಮೂಲಕ ತಮ್ಮ ಸಿನಿ ಜರ್ನಿ ಆರಂಭಿಸಿದರು. ಬಾಲಿವುಡ್ ಚಿತ್ರರಂಗದಲ್ಲಿ ಸಾಕಷ್ಟು ಜನಪ್ರಿಯತೆ ಪಡೆದಿದ್ದ ಇವರಿಗೆ ಟಾಲಿವುಡ್ ನ 2014ರಲ್ಲಿ ‘ಹಾರ್ಟ್ ಅಟ್ಯಾಕ್’ ಸಿನಿಮಾದಲ್ಲಿ ಅಭಿನಯಿಸುವ ಅವಕಾಶ ಸಿಕ್ಕಿತು.

2015 ರಲ್ಲಿ ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಜೊತೆ ‘ರಣವಿಕ್ರಮ’ ಚಿತ್ರದಲ್ಲಿ ಅಭಿನಯಿಸುವ ಮೂಲಕ  ಸ್ಯಾಂಡಲ್ ವುಡ್ ಗೆ ಪಾದಾರ್ಪಣೆ ಮಾಡಿದರು. ಕಳೆದ ವರ್ಷ ‘ದಿ ಕೇರಳ ಸ್ಟೋರಿ’ ಮೂಲಕ ತಮ್ಮ ಜನಪ್ರಿಯತೆಯನ್ನು ಇನ್ನಷ್ಟು ಹೆಚ್ಚಿಸಿಕೊಂಡಿದ್ದಾರೆ. ನಟಿ ಆದ ಶರ್ಮ ಇತ್ತೀಚಿಗೆ ದಿ ಗೇಮ್ ಆಫ್ ಗಿರ್ಗಿಟ್ ನಲ್ಲಿ ಅಭಿನಯಿಸಿದ್ದು, ಈಗಾಗಲೇ ಬಹುತೇಕ ಶೂಟಿಂಗ್ ಪೂರ್ಣಗೊಳಿಸಿರುವ ಚಿತ್ರತಂಡ ಪೋಸ್ಟ್ ಪ್ರೊಡಕ್ಷನ್ ಕೆಲಸದಲ್ಲಿ  ನಿರತವಾಗಿದೆ.

https://twitter.com/DDNational/status/1789154717660262516?ref_src=twsrc%5Egoogle%7Ctwcamp%5Eserp%7Ctwgr%5Etweet

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read